ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆ ಕುರಿತ ಸಿಎಂ ಸಭೆ

ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು:

• ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು.

• ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ.

• ಎಥೆನಾಲ್ ಕೋಟಾ ನಿಗದಿ, ಮೆಕ್ಕೆಜೋಳ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಮೆಕ್ಕೆಜೋಳ ಬೆಳೆಗಾರರ ಹಿತವನ್ನು ಕಾಪಾಡಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.

• ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು.

• ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ.

• ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್‌ಗೆ ರೂ.2,639 ಇದ್ದು, ಇದರಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.2,400 ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ.

• ರಾಜ್ಯದಲ್ಲಿ ಧಾನ್ಯ ಮಾತ್ರ ಆಧಾರಿತ ಮೂರು ಡಿಸ್ಟಿಲರಿಗಳಿಗೆ ಒಟ್ಟು 94,400 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 2,48,461 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆ ಇದೆ. 7 ಡ್ಯುಯಲ್ ಫೀಡ್‌ಸ್ಟಾಕ್ ಡಿಸ್ಟಿಲರಿಗಳಿಗೆ 1,90,751 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 5,02,056 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆಯಿದೆ.

• ನಿಯಮಾನುಸಾರ ಡಿಸ್ಟಿಲರಿಗಳು ರೈತರಿಂದ ಮೆಕ್ಕೆಜೋಳ ಖರೀದಿಸಿ, ರೈತರ ಹಿತ ಕಾಯುವ ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಬೇಕು.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

4 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

7 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

9 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

22 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago