ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಸರಹದ್ದಿನ ದಿಂಬಾರ್ಲಹಳ್ಳಿ-ದಾಸಾರ್ಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಮಾಲು ವಶಕ್ಕೆ ಪಡೆದುಕೊಂಡಿದ್ದಾರೆ.
ದಿಬ್ಬೂರಹಳ್ಳಿ ಠಾಣಾ ಸಿಬ್ಬಂದಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಠಾಣಾಧಿಕಾರಿಗಳು ಅಕ್ರಮವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಟಿ.ವೆಂಕಟಪುರ ಗ್ರಾಮದ ಜನಮಡುಗಪ್ಪ ಅಲಿಯಾಸ್ ಲಂಬು ಬಿನ್ ಲೇಟ್ ನಾರಾಯಣಪ್ಪ (55) ರವರ ಜಮೀನಿನಲ್ಲಿ ಮೆಕ್ಕೆ ಜೋಳದ ನಡುವೆ ಗಾಂಜಾ ಗಿಡಗಳನ್ನು ಬೆಳೆಸಿದ್ದು, ಸ್ಥಳದಲ್ಲಿ ದಾಳಿ ಮಾಡಿ 4 ಕೆಜಿ 70 ಗ್ರಾಂ ತೂಕದ ಸುಮಾರು 1,05,000 ರೂ ಬೆಲೆಬಾಳುವ ಗಾಂಜಾ ಗಿಡಗಳನ್ನು ಆರೋಪಿ ಸಹಿತ ವಶಕ್ಕೆಪಡೆದುಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಎಂ ಶ್ರೀನಿವಾಸ್, ದಿಬ್ಬೂರಳ್ಳಿ ಪೊಲೀಸ್ ಠಾಣಾ ಆರಕ್ಷಕ ಉಪ ನಿರೀಕ್ಷಕಿ ಶ್ಯಾಮಲ, ಪೊಲೀಸ್ ಕಾನ್ ಸ್ಟೇಬಲ್ ಗಳಾದ ಮಂಜುನಾಥ, ನರಸಿಂಹಯ್ಯ, ಕೃಷ್ಣಪ್ಪ, ಚಂದ್ರಶೇಖರ್, ಪ್ರತಾಪ್.ಎ.ಆರ್, ಶ್ರೀನಿವಾಸಮೂರ್ತಿ, ಶಶಿಕುಮಾರ್ ಹಾಗೂ ತನಿಖಾ ಸಹಾಯಕ ಸಿಬ್ಬಂದಿ ಸಂತೋಷಕುಮಾರ್, ವಸಂತಕುಮಾರ್ ದಾಳಿ ವೇಳೆ ಇದ್ದರು.
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…