ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24 ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ 2.50 ಲಕ್ಷ ಇರಬೇಕು ಹಾಗೂ ಪ್ರವರ್ಗ-2ಎ, 2ಬಿ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಗೆ ರೂ 1.00 ಲಕ್ಷ ಆದಾಯ ಮಿತಿ ಇರಬೇಕು.
ವಿದ್ಯಾರ್ಥಿಗಳು https://shp.karnatak.gov.in ಅನ್ನು ಸಂಪರ್ಕಿಸಿ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2023 ರ ಆಗಸ್ಟ್ 16 ಕೊನೆಯ ದಿನವಾಗಿದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಇಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು
ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-29787440 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…