2023-24ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಲ್ಲಿ (ಪಿಯುಸಿ ನಂತರ ಕೋರ್ಸುಗಳ ವಿದ್ಯಾರ್ಥಿಗಳಿಗೆ) ಉಚಿತ ಪ್ರವೇಶಾತಿಗಾಗಿ ಆನ್‌ಲೈನ್ ಎಸ್.ಎಚ್.ಪಿ ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿಯುಸಿ ನಂತರ ಕೋರ್ಸುಗಳ ವಿದ್ಯಾರ್ಥಿಗಳಿಗೆ) ಉಚಿತ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್, ಪಾರ್ಸಿ, ಇತರೆ ವರ್ಗದ ಪ್ರವರ್ಗ-1. 2ಎ. 2ಬಿ. 3ಎ. 3ಬಿ ಪ.ಜಾತಿ/ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು https//shp.karnataka.gov.in ಅನ್ನು ಸಂಪರ್ಕಿಸಿ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ಆಗಸ್ಟ್ 16 ಕೊನೆಯ ದಿನವಾಗಿರುತ್ತದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರಕ್ಕಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in/bengaluru_rural/public ನ್ನು ನೋಡಬಹುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ:8277799990 ಸಂಪರ್ಕಿಸಬಹುದು.
ಅಥವಾ ಕೆಳಕಂಡ ತಾಲ್ಲೂಕು ನಿಲಯಪಾಲಕರನ್ನು ಸಂಪರ್ಕಿಸುವುದು.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ ದಂಡುಪಾಳ್ಯ, ಹೊಸಕೋಟೆ ತಾಲ್ಲೂಕು. ಶ್ರೀ.ಅಕ್ರಂ ಪಾಷ 8310397004,
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ ನೆಲಮಂಗಲ ತಾಲ್ಲೂಕು,
ಶ್ರೀ.ಕೃಷ್ಣ ಎಂ.ಆರ್ 8317403213,
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ಕಂಟನಕುಂಟೆ, ದೊಡ್ಡಬಳ್ಳಾಪುರ ತಾಲ್ಲೂಕು, ಶ್ರೀಮತಿ. ಪುಷ್ಪಲತ 9686574866 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…