ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ (ಪಿಯುಸಿ ನಂತರದ ಕೋರ್ಸುಗಳ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

2023-24ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಲ್ಲಿ (ಪಿಯುಸಿ ನಂತರ ಕೋರ್ಸುಗಳ ವಿದ್ಯಾರ್ಥಿಗಳಿಗೆ) ಉಚಿತ ಪ್ರವೇಶಾತಿಗಾಗಿ ಆನ್‌ಲೈನ್ ಎಸ್.ಎಚ್.ಪಿ ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿಯುಸಿ ನಂತರ ಕೋರ್ಸುಗಳ ವಿದ್ಯಾರ್ಥಿಗಳಿಗೆ) ಉಚಿತ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್, ಪಾರ್ಸಿ, ಇತರೆ ವರ್ಗದ ಪ್ರವರ್ಗ-1. 2ಎ. 2ಬಿ. 3ಎ. 3ಬಿ ಪ.ಜಾತಿ/ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ   2023-24ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು https//shp.karnataka.gov.in ಅನ್ನು ಸಂಪರ್ಕಿಸಿ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ಆಗಸ್ಟ್ 16 ಕೊನೆಯ ದಿನವಾಗಿರುತ್ತದೆ.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರಕ್ಕಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in/bengaluru_rural/public ನ್ನು ನೋಡಬಹುದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ:8277799990 ಸಂಪರ್ಕಿಸಬಹುದು.
ಅಥವಾ ಕೆಳಕಂಡ ತಾಲ್ಲೂಕು ನಿಲಯಪಾಲಕರನ್ನು ಸಂಪರ್ಕಿಸುವುದು.

ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ ದಂಡುಪಾಳ್ಯ, ಹೊಸಕೋಟೆ ತಾಲ್ಲೂಕು. ಶ್ರೀ.ಅಕ್ರಂ ಪಾಷ 8310397004,
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ ನೆಲಮಂಗಲ ತಾಲ್ಲೂಕು,
ಶ್ರೀ.ಕೃಷ್ಣ ಎಂ.ಆರ್ 8317403213,
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ಕಂಟನಕುಂಟೆ, ದೊಡ್ಡಬಳ್ಳಾಪುರ ತಾಲ್ಲೂಕು, ಶ್ರೀಮತಿ. ಪುಷ್ಪಲತ 9686574866 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನ.29ರಂದು ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ತಾಲೂಕಿನ 220/66/11 ಕೆ.ವಿ. ಕೆಐಎಡಿಬಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 29ರ ಭಾನುವಾರ…

16 minutes ago

ಸಂವಿಧಾನವು ಶೋಷಿತರಿಗೆ ಧ್ವನಿ, ಬಡವರಿಗೆ ಭರವಸೆಯ ಆಶಾಕಿರಣ- ನರೇಶ್ ಎಸ್ ಜಿ

ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನವು ಕೇವಲ ಆಡಳಿತ ನಡೆಸುವ ಪುಸ್ತಕವಲ್ಲ. ಅದು ಶೋಷಿತರಿಗೆ ಧ್ವನಿ ನೀಡಿದ…

2 hours ago

ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ

ನಾಯಕ ಸಮುದಾಯದವರು ವಿದ್ಯಾವಂತರಾಗಿ ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದಿಂದ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು…

3 hours ago

ಮಲ್ಲೋಹಳ್ಳಿ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಬೀಗ ತೆರವು; ಮತ್ತೆ ಪೂಜೆಗೆ ಅವಕಾಶ: ಗ್ರಾಮಸ್ಥರ ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯಕ್ಕೆ ತಾತ್ಕಾಲಿಕ ತೆರೆ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಮುಂದಿನ ಕ್ರಮ

ದೊಡ್ಡಬಳ್ಳಾಪುರ: ತಾಲೂಕಿನ ಮಲ್ಲೋಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹಾಕಲಾಗಿದ್ದ ಬೀಗವನ್ನು ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ತೆರವುಗೊಳಿಸಲಾಗಿದ್ದು,…

7 hours ago

ಅರ್ಚಕರ ಮೇಲಿನ ದ್ವೇಷಕ್ಕೆ ದೇವಸ್ಥಾನಕ್ಕೆ ಬೀಗ? ಅರ್ಚಕರ ಬದಲಾವಣೆಗಾಗಿ ದೇವಸ್ಥಾನ ಬಂದ್ ಮಾಡಿದ ಆರೋಪ

ದೊಡ್ಡಬಳ್ಳಾಪುರ: ತಾಲೂಕಿನ ಮಲ್ಲೋಹಳ್ಳಿ ಗ್ರಾಮದ ಮುಜರಾಯಿ ಇಲಾಖೆಗೆ ಸೇರಿದ ಪ್ರಸಿದ್ಧ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ನಿನ್ನೆ ಸಂಜೆ ಬೀಗ…

11 hours ago

ಅಪಾಯದ ಮಟ್ಟ ಮೀರಿ ಮರದ ದಿಮ್ಮಿಗಳ ಸಾಗಣೆ: ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಕಂಟಕ!

ದೊಡ್ಡಬಳ್ಳಾಪುರ: ನಿಯಮಗಳನ್ನು ಗಾಳಿಗೆ ತೂರಿ, ಸಾಮರ್ಥ್ಯಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಮರದ ದಿಮ್ಮಿಗಳನ್ನು ತುಂಬಿಕೊಂಡು ಲಾರಿಯೊಂದು ರಾತ್ರಿ ವೇಳೆ ದೊಡ್ಡಬಳ್ಳಾಪುರ-ದೇವನಹಳ್ಳಿ ಮಾರ್ಗದಲ್ಲಿ…

13 hours ago