ಮೆಡಿಕವರ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಆರ್ಥೊ ರೊಬೋಟಿಕ್ ಶಸ್ತ್ರಚಿಕಿತ್ಸಾ ತಂತ್ರಜ್ಞಾನ ಆರಂಭ

ಮೆಡಿಕವರ್ ಆಸ್ಪತ್ರೆ ತನ್ನ ಆರ್ಥೋಪೆಡಿಕ್ ವಿಭಾಗವನ್ನು ಮತ್ತಷ್ಟು ಬಲಪಡಿಸುವ ಸಲುವಾಗಿ, ಅತ್ಯಾಧುನಿಕ ಆರ್ಥೊ ರೊಬೋಟಿಕ್ ಶಸ್ತ್ರಚಿಕಿತ್ಸಾ ತಂತ್ರಜ್ಞಾನವನ್ನು ಯಶಸ್ವಿಯಾಗಿ ಆರಂಭಿಸಿದೆ.

ಈ ತಂತ್ರಜ್ಞಾನದ ಮೂಲಕ ರೋಗಿಗಳಿಗೆ ಹೆಚ್ಚು ನಿಖರ ಹಾಗೂ ಅನುಕೂಲಕರ ಶಸ್ತ್ರಚಿಕಿತ್ಸೆಯನ್ನು ನೀಡುವುದು ಸಾಧ್ಯವಾಗಲಿದೆ.

ಈ ಹೊಸ ಉಪಕ್ರಮದಿಂದ ಮೂಳೆ ಮತ್ತು ಜೋಡಣೆ ಸಂಬಂಧಿತ ಜಟಿಲ ಸಮಸ್ಯೆಗಳಿಗೆ ಹೆಚ್ಚು ನಿಖರವಾದ ಮತ್ತು ಪರಿಣಾಮಕಾರಿ ಚಿಕಿತ್ಸೆ ದೊರೆಯಲಿದ್ದು, ವಿಶೇಷವಾಗಿ ಮಂಡಿ ಮತ್ತು ಹಿಪ್ ಜೋಡಣೆಯ ಬದಲಾವಣಾ ಶಸ್ತ್ರಚಿಕಿತ್ಸೆಗಳಲ್ಲಿ ರೊಬೋಟಿಕ್ ತಂತ್ರಜ್ಞಾನವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ.

ಈ ತಂತ್ರಜ್ಞಾನದ ಅನುಷ್ಠಾನದಲ್ಲಿ ಮೆಡಿಕವರ್‌ ಆಸ್ಪತ್ರೆಯ ಹಿರಿಯ ಮೂಳೆ ತಜ್ಞರು ಡಾ. ಆರ್. ಡಿ. ಚಕ್ರವರ್ತಿ, ಡಾ. ರವೀಂದ್ರ ಪುಟ್ಟಸ್ವಾಮಯ್ಯ, ಡಾ. ಸಂಜಯ್ ಹೆಗಡೆ, ಡಾ. ಕೃಷ್ಣಕುಮಾರ್ ಮತ್ತು ಡಾ. ರಾಘವೇಂದ್ರ ರವರು ಪ್ರಮುಖ ಪಾತ್ರವಹಿಸಿದ್ದಾರೆ. ಈ ತಜ್ಞರು ರೊಬೋಟಿಕ್ ತಂತ್ರಜ್ಞಾನದಲ್ಲಿ ಪರಿಣಿತರಾಗಿದ್ದು, ವಿಶ್ವಮಟ್ಟದ ಚಿಕಿತ್ಸೆ ನೀಡಲು ಸದಾ ಸಿದ್ಧರಾಗಿದ್ದಾರೆ.

ಈ ಶಸ್ತ್ರಚಿಕಿತ್ಸಾ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಗೋಪಾಲ್ ಹಾಗೂ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಶೃತಿ ಕೊಯ್ಲಿ ಅವರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ‌……..

ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…

7 hours ago

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

19 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

19 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

21 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

21 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

24 hours ago