ಬೆಂಗಳೂರು, ಜೂನ್ 21: ಬೆಂಗಳೂರಿನ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಯೋಗಗುರು ಡಾ. ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿ ವರ್ಗ ಯೋಗ ಅಭ್ಯಾಸದಲ್ಲಿ ಭಾಗವಹಿಸಿದರು.
ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಅವರು ಸಮಾರಂಭದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು ಹಾಗೂ ಎಲ್ಲಾ ವಿಭಾಗಗಳ ಸಿಬ್ಬಂದಿಯೊಂದಿಗೆ ಯೋಗದಲ್ಲಿ ಭಾಗವಹಿಸಿದರು.
ದೈನಂದಿನ ಜೀವನದಲ್ಲಿ ಯೋಗದ ಮಹತ್ವವನ್ನು ಪ್ರಚಾರ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕೃಷ್ಣಮೂರ್ತಿ, “ಯೋಗ ಕೇವಲ ವ್ಯಾಯಾಮವಲ್ಲ; ಇದು ಮನಸ್ಸು, ದೇಹ ಹಾಗೂ ಆತ್ಮದ ಸಮನ್ವಯವಾಗಿರುವ ದಾರಿಯಾಗಿದೆ. ಮೆಡಿಕವರ್ ಆಸ್ಪತ್ರೆ ಸಮಗ್ರ ಆರೋಗ್ಯ ಸೇವೆಗೆ ಬದ್ಧವಾಗಿದೆ, ಈ ಕಾರ್ಯಕ್ರಮ ಅದನ್ನು ಪ್ರತಿಬಿಂಬಿಸುತ್ತದೆ” ಎಂದರು.
ಆಸ್ಪತ್ರೆಯ ಎಲ್ಲಾ ಸಿಬ್ಬಂದಿಯು ಯೋಗದಲ್ಲಿ ಭಾಗವಹಿಸಿ, ಶಾಂತಿಯುತ ವಾತಾವರಣವನ್ನು ಸೃಷ್ಟಿಸಿದರು ಮತ್ತು ಸಮೂಹ ಮನೋಭಾವವನ್ನು ಮೆರೆದರು.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…