ಬೆಂಗಳೂರು, ವೈಟ್‌ಫೀಲ್ಡ್, : ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯ ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ಘಟಕವು ಕೇವಲ 5 ತಿಂಗಳಲ್ಲಿ 100ಕ್ಕೂ ಹೆಚ್ಚು ಯಶಸ್ವಿ ರೋಬೋಟಿಕ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿ, ತಂತ್ರಜ್ಞಾನ ಮತ್ತು ರೋಗಿ ಕೇಂದ್ರೀಕೃತ ಚಿಕಿತ್ಸೆಯ ಹೊಸ ಮಾನದಂಡ ಸ್ಥಾಪಿಸಿದೆ.
ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಗೈನಿಕಾಲಜಿ ಮತ್ತು ಜೀರ್ಣಾಂಗ ಶಾಸ್ತ್ರ ಕ್ಷೇತ್ರಗಳಲ್ಲಿ ನಡೆದ ಈ ಶಸ್ತ್ರಚಿಕಿತ್ಸೆಗಳಿಂದ ರೋಗಿಗಳ ಚೇತರಿಕೆಯ ಅವಧಿ, ನೋವು ಮತ್ತು ಆಸ್ಪತ್ರೆಯಲ್ಲಿ ಉಳಿಯುವ ಅವಧಿ ತುಂಬಾ ಕಡಿಮೆಯಾಗಿದೆ.
ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ನಾವು ಶಸ್ತ್ರಚಿಕಿತ್ಸೆಗಳನ್ನು ಸುರಕ್ಷಿತವಾಗಿ, ಸುಲಭವಾಗಿ ಮತ್ತು ಬೇಗನೆ ಮಾಡಿಸಲು ನಾವು ತಂತ್ರಜ್ಞಾನವನ್ನು ಬಳಸುತ್ತೇವೆ.ತಂತ್ರಜ್ಞಾನದಿಂದ ನಾವು ಕಡಿಮೆ ನೋವಿನಲ್ಲಿ, ಬೇಗ ಚೇತರಿಸಿಕೊಳ್ಳುವ ರೀತಿಯಲ್ಲಿ ಚಿಕಿತ್ಸೆಯನ್ನು ನೀಡಬಹುದು ಎಂದು ತಿಳಿಸಿದರು.
ರೋಬೊಟಿಕ್ ಶಸ್ತ್ರಚಿಕಿತ್ಸೆಯಲ್ಲಿ ನಡೆದ ಪ್ರಮುಖ ವೈದ್ಯರುಗಳಾದ ಡಾ. ಪ್ರಮೋದ್ – ಮೂತ್ರಶಾಸ್ತ್ರಜ್ಞ, ಡಾ. ಜಾವೆದ್ ಹುಸೇನ್ – ಸಾಮಾನ್ಯ ಶಸ್ತ್ರಚಿಕಿತ್ಸೆ, ಡಾ. ಕೌಶಿಕ್ ಸುಬ್ರಮಣಿಯನ್ – ಜೀರ್ಣಾಂಗ ಶಾಸ್ತ್ರಜ್ಞ, ಡಾ. ಮಾನಸಾ ರೆಡ್ಡಿ, ಡಾ. ಸಬಿಹಾ , ಡಾ. ಸಂಸ್ಕೃತಿ ರೆಡ್ಡಿ – ಗೈನಿಕಾಲಜಿ , ಪ್ರಮೋದ್ ಯು – ಮಾರ್ಕೆಟಿಂಗ್ ಮುಖ್ಯಸ್ಥ , ಸಂಪೂರ್ಣ ಮಾರ್ಕೆಟಿಂಗ್ ತಂಡ ಮತ್ತು OT ಸಿಬ್ಬಂದಿಗಳು ಭಾಗಿಯಾಗಿದ್ದರು . ಕೇಕ್ ಕಟ್ ಮಾಡುವುದರ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…