ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ, ಹಾಗೂ ಬಸ್ ಚಾಲಕರಿಗೆ ಜೀವ ರಕ್ಷಣೆ ತರಬೇತಿಯನ್ನು ಯಶಸ್ವಿಯಾಗಿ ನಡೆಸಲಾಯಿತು.
ಮೆಡಿಕವರ್ ಆಸ್ಪತ್ರೆಯ ತುರ್ತು ವಿಭಾಗದ ಮುಖ್ಯಸ್ಥ ಡಾ. ಕುಶಾಲ್ ಅವರ ನೇತೃತ್ವದಲ್ಲಿ ನಡೆಸಲಾದ ಈ ತರಬೇತಿಯಲ್ಲಿ, CPR , First Aid, ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಜೀವ ಉಳಿಸುವ ತಂತ್ರಗಳನ್ನು ಮಕ್ಕಳಿಗೆ ಕಲಿಸಲಾಯಿತು. 100ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ ಈ ಕಾರ್ಯಕ್ರಮವು, ಪ್ರಾಯೋಗಿಕವಾಗಿ ನಡೆಯಿತು.
ಶಾಲೆಯ ವೈಸ್ ಪ್ರಿನ್ಸಿಪಾಲ್ ಕವಿತಾ ಅವರು ಮಾತನಾಡಿ, ಈ ರೀತಿಯ ತರಬೇತಿ ಶಾಲಾ ಮಕ್ಕಳಿಗೆ ಹಾಗೂ ಸಿಬ್ಬಂದಿಗೆ ತುರ್ತು ಸಮಯದಲ್ಲಿ ಆತ್ಮವಿಶ್ವಾಸದಿಂದ ನಿಲ್ಲಲು ಸಹಾಯಮಾಡುತ್ತದೆ ಎಂದು ಮೆಡಿಕವರ್ ಆಸ್ಪತ್ರೆಯ ಈ ಪ್ರಚೋದನೆಗೆ ಕೃತಜ್ಞತೆ ಸಲ್ಲಿಸಿದರು.
ಈ ತರಬೇತಿಗಳು ಸಮುದಾಯದ ವೈದ್ಯಕೀಯ ತುರ್ತು ಪರಿಸ್ಥಿತಿಗಳ ವಿರುದ್ಧ ಸಮರ್ಪಕ ಪ್ರತಿಕ್ರಿಯೆ ನೀಡಲು ಸಜ್ಜು ಮಾಡುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತವೆ.