ಬೆಂಗಳೂರು, ವೈಟ್ ಫೀಲ್ದ್ – ಮೆಡಿಕವರ್ ಆಸ್ಪತ್ರೆ, ಬೆಂಗಳೂರು ಘಟಕದಲ್ಲಿ ಇಂದು ಬೆಳಿಗ್ಗೆ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರವನ್ನು ಭವ್ಯವಾಗಿ ಉದ್ಘಾಟಿಸಲಾಯಿತು. ನೂತನ ಕೇಂದ್ರವು ಸಂಯೋಜಿತ ರೋಬೊಟಿಕ್ ಶಸ್ತ್ರಚಿಕಿತ್ಸಾ ತಂತ್ರಜ್ಞಾನವನ್ನು ಪರಿಚಯಿಸಿ, ಮೂಳೆ-ಸಂಧಿ ಚಿಕಿತ್ಸೆಯಲ್ಲಿ ಮಹತ್ತರ ಹೆಜ್ಜೆ ಇಟ್ಟಿದೆ.
ಆರ್ಥೋ ವಿಂಗ್‌ನ ನಡೆದ ಈ ಕಾರ್ಯಕ್ರಮದಲ್ಲಿ, ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಜಿ, ಮಾರ್ಕೆಟಿಂಗ್ ವಿಭಾದ ಮುಖ್ಯಸ್ಥ ಪ್ರಮೋದ್ ಯು, ಆಸ್ಪತ್ರೆಯ ಹಿರಿಯ ಮೂಳೆ ತಜ್ಞರಾದ ಆರ್ ಡಿ ಚಕ್ರವರ್ತಿ, ಸಂಜಯ್ ಹೆಗಡೆ, ರವೀಂದ್ರ ಪುಟ್ಟಸ್ವಾಮಯ್ಯ, ಕೃಷ್ಣಕುಮಾರ್ ಹಾಗೂ ರಾಘವೇಂದ್ರ ರೆಡ್ಡಿಯವರು ಭಾಗವಹಿಸಿ ಕೇಂದ್ರವನ್ನು ಉದ್ಘಾಟಿಸಿದರು. ಈ ಮೂಲಕ ಹೆಚ್ಚು ನಿಖರತೆ, ಕಡಿಮೆ ಪುನಶ್ಚೇತನ ಸಮಯ ಮತ್ತು ಉತ್ತಮ ಗುಣಮಟ್ಟದ ಚಿಕಿತ್ಸೆ ಫಲಿತಾಂಶಗಳನ್ನು ಸಾಧಿಸುವ ಉದ್ದೇಶವಿದೆ.
ಮೆಡಿಕವರ್ ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಅವರು ಹೇಳಿದರು: “ಈ ರೋಬೊಟಿಕ್ ತಂತ್ರಜ್ಞಾನದಿಂದ ನಾವು ಹೆಚ್ಚು ನಿಖರವಾದ ಶಸ್ತ್ರಚಿಕಿತ್ಸೆ ನಡೆಸಬಹುದು. ಇದು ನೂರಾರು ಸಂಧಿ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಆಶಾದಾಯಕವಾಗಿದೆ.”
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಭಾಗಿಯಾಗಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…