ಮೆಡಿಕವರ್ ಆಸ್ಪತ್ರೆ, ಬೆಂಗಳೂರು: ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಭವ್ಯ ಉದ್ಘಾಟನೆ

ಬೆಂಗಳೂರು, ವೈಟ್‌ ಫೀಲ್ದ್‌ – ಮೆಡಿಕವರ್ ಆಸ್ಪತ್ರೆ, ಬೆಂಗಳೂರು ಘಟಕದಲ್ಲಿ ಇಂದು ಬೆಳಿಗ್ಗೆ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರವನ್ನು ಭವ್ಯವಾಗಿ ಉದ್ಘಾಟಿಸಲಾಯಿತು. ನೂತನ ಕೇಂದ್ರವು ಸಂಯೋಜಿತ ರೋಬೊಟಿಕ್ ಶಸ್ತ್ರಚಿಕಿತ್ಸಾ ತಂತ್ರಜ್ಞಾನವನ್ನು ಪರಿಚಯಿಸಿ, ಮೂಳೆ-ಸಂಧಿ ಚಿಕಿತ್ಸೆಯಲ್ಲಿ ಮಹತ್ತರ ಹೆಜ್ಜೆ ಇಟ್ಟಿದೆ.

ಆರ್ಥೋ ವಿಂಗ್‌ನ ನಡೆದ ಈ ಕಾರ್ಯಕ್ರಮದಲ್ಲಿ, ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಜಿ, ಮಾರ್ಕೆಟಿಂಗ್‌ ವಿಭಾದ ಮುಖ್ಯಸ್ಥ ಪ್ರಮೋದ್‌ ಯು, ಆಸ್ಪತ್ರೆಯ ಹಿರಿಯ ಮೂಳೆ ತಜ್ಞರಾದ ಆರ್‌ ಡಿ ಚಕ್ರವರ್ತಿ, ಸಂಜಯ್‌ ಹೆಗಡೆ, ರವೀಂದ್ರ ಪುಟ್ಟಸ್ವಾಮಯ್ಯ, ಕೃಷ್ಣಕುಮಾರ್‌ ಹಾಗೂ ರಾಘವೇಂದ್ರ ರೆಡ್ಡಿಯವರು ಭಾಗವಹಿಸಿ ಕೇಂದ್ರವನ್ನು ಉದ್ಘಾಟಿಸಿದರು. ಈ ಮೂಲಕ ಹೆಚ್ಚು ನಿಖರತೆ, ಕಡಿಮೆ ಪುನಶ್ಚೇತನ ಸಮಯ ಮತ್ತು ಉತ್ತಮ ಗುಣಮಟ್ಟದ ಚಿಕಿತ್ಸೆ ಫಲಿತಾಂಶಗಳನ್ನು ಸಾಧಿಸುವ ಉದ್ದೇಶವಿದೆ.

ಮೆಡಿಕವರ್ ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಅವರು ಹೇಳಿದರು: “ಈ ರೋಬೊಟಿಕ್ ತಂತ್ರಜ್ಞಾನದಿಂದ ನಾವು ಹೆಚ್ಚು ನಿಖರವಾದ ಶಸ್ತ್ರಚಿಕಿತ್ಸೆ ನಡೆಸಬಹುದು. ಇದು ನೂರಾರು ಸಂಧಿ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಆಶಾದಾಯಕವಾಗಿದೆ.”
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಭಾಗಿಯಾಗಿದ್ದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

1 hour ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

13 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

17 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

20 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

22 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago