ಬೆಂಗಳೂರು, 29 ಸೆಪ್ಟೆಂಬರ್ 2025: ಮೆಡಿಕವರ್ ಆಸ್ಪತ್ರೆ, ವೈಟ್‌ಫೀಲ್ಡ್ ನಲ್ಲಿ ವರ್ಲ್ಡ್ ಹಾರ್ಟ್ ಡೇ ಪ್ರಯುಕ್ತ ವಾಕ್‌ಥಾನ್ ಆಯೋಜಿಸಲಾಯಿತು. ಹೃದಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ತಡೆಗಟ್ಟುವ ಜೀವನಶೈಲಿಯನ್ನು ಉತ್ತೇಜಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.
ಬೆಳಿಗ್ಗೆ 6:30 ಗಂಟೆಗೆ ಆಸ್ಪತ್ರೆ ಆವರಣದಿಂದ ವಾಕ್‌ಥಾನ್‌ಗೆ ಚಾಲನೆ ದೊರೆತು, ವೈದ್ಯರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಮುದಾಯದ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡರು. ಒಟ್ಟು 2 ಕಿಮೀ ವಾಕ್‌ಥಾನ್ ನಡೆಯಿತು.
ಯುನಿಟ್ ಹೆಡ್ ಕೃಷ್ಣಮೂರ್ತಿ ಸ್ವಾಗತ ಭಾಷಣ ಮಾಡಿದರು. ಡಾ. ನಾಗ ಶ್ರೀನಿವಾಸ್ ವರ್ಲ್ಡ್ ಹಾರ್ಟ್ ಡೇ ಮಹತ್ವ ಮತ್ತು ವಾಕ್‌ಥಾನ್ ಉದ್ದೇಶವನ್ನು ವಿವರಿಸಿದರು. ಹೃದಯ ತಜ್ಞರಾದ ಡಾ. ರಾಘವೇಂದ್ರ ಚಿಕಟೂರು ಮತ್ತು ಡಾ. ಮೇಜರ್ ಜಯಪ್ರಸಾದ ಸಹ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಈ ಕಾರ್ಯಕ್ರಮಕ್ಕೆ ಸನ್ ಫಾರ್ಮಾ ಮುಖ್ಯ ಪ್ರಾಯೋಜಕರಾಗಿದ್ದು, ಇಂಡಿಯನ್ ಎಕ್ಸ್‌ಪ್ರೆಸ್ ಮಾಧ್ಯಮ ಸಹಭಾಗಿಯಾಗಿತ್ತು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…