ಮೆಣಸಿ ಗೇಟ್ ನಲ್ಲಿ ನಿಲ್ಲದ ಅಪಘಾತಗಳು: ಆ್ಯಕ್ಸಿಡೆಂಟ್ ಹಾಟ್‌ಸ್ಪಾಟ್‌ ಆದರು ಕ್ಯಾರೆ ಎನ್ನದ ಸಂಬಂಧಪಟ್ಟವರು

ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ ಹಾದುಹೋಗಿರುವ ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ಅಪಘಾತಗಳು ನಡೆಯುತ್ತಲೇ ಇರುತ್ತವೆ…

ವಾರಕ್ಕೆ ಮೂರ್ನಾಲ್ಕು ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಅಪಘಾತಗಳಿಂದಾಗಿ ಅನೇಕ ಸಾವು-ನೋವುಗಳನ್ನು ಜನ ಅನುಭುವಸುತ್ತಿದ್ದಾರೆ…ಹೀಗಿದ್ದರೂ ಅಪಘಾತ ನಿಯಂತ್ರಣ ಕ್ರಮಗಳನ್ನು ಸಂಬಂಧಪಟ್ಟವರು‌ ಕೈಗೊಳ್ಳದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ…

ಇಂದು ಸಂಜೆ ಇದೇ ಮೆಣಸಿ ಗೇಟ್ ಬಳಿ ಕಾರು‌ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ರಸ್ತೆ ತಿರುವು ಪಡೆಯುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ರವನಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಾಗೂ ಬೈಕಿನ ಮುಂಭಾಗ ಜಾಖಂಗೊಂಡಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

6 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

10 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

13 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

16 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago