ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮೆನ್ಸ್ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು ನೋಂದಾಯಿಸಲು 2023ರ ಫೆಬ್ರವರಿ 22 ಕೊನೆಯ ದಿನವಾಗಿದೆ.
ಆಸಕ್ತರು ತಮ್ಮ ಹೆಸರು ನೋಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಖುದ್ದಾಗಿ ಭೇಟಿ ನೀಡಬಹುದು ಅಥವಾ ಮೊಬೈಲ್ ಸಂಖ್ಯೆ: 9113880324, 9740982585, 8884554510, 8050549412, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಆನಂದ್.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…