ಮೆನ್ಸ್‌ ಪಾರ್ಲರ್‌ ತರಬೇತಿಗಾಗಿ ಯುವಕರಿಂದ ಅರ್ಜಿ ಆಹ್ವಾನ

ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಮೆನ್ಸ್‌ ಪಾರ್ಲರ್‌ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು ನೋಂದಾಯಿಸಲು 2023ರ ಫೆಬ್ರವರಿ 22 ಕೊನೆಯ ದಿನವಾಗಿದೆ.
ಆಸಕ್ತರು ತಮ್ಮ ಹೆಸರು ನೋಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಖುದ್ದಾಗಿ ಭೇಟಿ ನೀಡಬಹುದು ಅಥವಾ ಮೊಬೈಲ್‌ ಸಂಖ್ಯೆ: 9113880324, 9740982585, 8884554510, 8050549412, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಆನಂದ್‌.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

24 minutes ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

2 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

2 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

9 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

20 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago