ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಎರಗಿದ ಕರಡಿ, ಮನಸೋಇಚ್ಛೆ ರೈತನ ಮೈಯಲ್ಲಾ ಪರಚಿ ಗಾಯಪಡಿಸಿರುವ ಘಟನೆ ತಾಲೂಕಿನ ಹೊಸಹಳ್ಳಿ ಸಮೀಪದ ಕುಕ್ಕಲಹಳ್ಳಿ ಬಳಿ ಇಂದು ಮಧ್ಯಾಹ್ನ ಸುಮಾರು 3:50ರಲ್ಲಿ ನಡೆದಿದೆ….
ಕುಕ್ಕಲಹಳ್ಳಿ ಗ್ರಾಮದ ಲಕ್ಷ್ಮಿನರಸಪ್ಪ (58) ಕರಡಿ ದಾಳಿಯಿಂದ ಗಾಯಗೊಂಡ ರೈತ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುಕ್ಕಲಹಳ್ಳಿ ಗ್ರಾಮದ ಹೊರವಲಯದಲ್ಲಿ ಎಂದಿನಂತೆ ಮೇಕೆ ಮೇಯಿಸಲು ರೈತ ಲಕ್ಷ್ಮಿನರಸಪ್ಪ ಹೋಗಿದ್ದಾರೆ. ಸುಮಾರು 3:50ರ ಸಮಯದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕರಡಿ ಏಕಾಏಕಿ ರೈತನ ಮೇಲೆ ದಾಳಿ ನಡೆಸಿದೆ….
ಘಟನಾ ಸ್ಥಳದಲ್ಲಿ ಮೂರ್ನಾಲ್ಕು ಹಲಸಿನ ಮರಗಳಿದ್ದು, ಹಲಸಿನ ಹಣ್ಣು ತಿನ್ನಲು ಹಲಸಿನ ಮರ ಹತ್ತಿದ್ದು, ರೈತನ ಶಬ್ಧ ಕೇಳುತ್ತಿದ್ದಂತೆ ರೈತನ ಮೇಲೆ ಎರಗಿ ಮೈಯಲ್ಲಾ ಪರಚಿ ಗಾಯಪಡಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ…
ಕರಡಿ ದಾಳಿಯಿಂದ ಗಾಯಗೊಂಡ ಲಕ್ಷ್ಮಿನರಸಪ್ಪನವರು ಕೂಡಲೇ ಹೊಸಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆದಿದ್ದಾರೆ…
ಹೊಸಹಳ್ಳಿ ವ್ಯಾಪ್ತಿಯ ಸುತ್ತಮುತ್ತಾ ಗ್ರಾಮಗಳಲ್ಲಿ ಚಿರತೆ, ಕರಡಿಗಳ ಕಾಟ ಹೆಚ್ಚಾಗಿದೆ.. ಕೂಡಲೇ ಇವುಗಳನ್ನು ಸೆರೆ ಹಿಡಿದು ನೆಮ್ಮದಿ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…