ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ ನ್ಯಾಯಾಲಯ, ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ.

2021ರ ಆಗಸ್ಟ್ 23ರಂದು ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮೂರು ವರ್ಷದ ಮಗು ನಯನಳಿಗೆ ಮೇಕೆಯೊಂದು ಗುದ್ದಿದ ಹಿನ್ನೆಲೆಯಲ್ಲಿ ಮೇಕೆಯನ್ನು ಕಟ್ಟಿ ಹಾಕುವಂತೆ ಮಗುವಿನ ಕುಟುಂಬದವರು ಆರೋಪಿಗಳಿಗೆ ತಿಳಿಸಿದ್ದರು. ಇದೇ ವಿಚಾರವಾಗಿ ವಿ.ಟಿ. ಚಂದ್ರಶೇಖರ್ ಹಾಗೂ ಆರೋಪಿಗಳ ನಡುವೆ ಗಲಾಟೆ ನಡೆದಿತ್ತು.

ಗಲಾಟೆ ವೇಳೆ ಆರೋಪಿ ರವಿ @ ರವಿಕುಮಾರ್ ಎಂಬಾತ ಚಂದ್ರಶೇಖರ್ ಅವರ ಎದೆಗೆ ಬಲವಾಗಿ ಗುದ್ದಿದ್ದಾನೆ ಎಂದು ಆರೋಪಿಸಲಾಗಿತ್ತು. ಇತರ ಆರೋಪಿಗಳಾದ ಮುನಿಯಪ್ಪ ಹಾಗೂ ಮುನಿಯಮ್ಮ ಅವರು ಗಲಾಟೆಯಲ್ಲಿ ಭಾಗಿಯಾಗಿದ್ದರು. ಗಂಭೀರವಾಗಿ ಗಾಯಗೊಂಡ ಚಂದ್ರಶೇಖರ್ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದರು ಎಂದು ಪ್ರಕರಣದ ತನಿಖೆಯಲ್ಲಿ ತಿಳಿದುಬಂದಿತ್ತು.

ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.

ಪ್ರಕರಣವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿರುವ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಎಸ್‌.ಸಿ. ನಂ.10009/2022ರಂತೆ ವಿಚಾರಣೆಗೆ ಒಳಪಟ್ಟಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿದೆ.

ಐಪಿಸಿ ಕಲಂ 302ರಡಿ ಕೊಲೆ ಅಪರಾಧಕ್ಕೆ ಆರೋಪಿ ರವಿ @ ರವಿಕುಮಾರ್‌ಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಲಾಗಿದೆ. ಇನ್ನು ಐಪಿಸಿ ಕಲಂ 323ರಡಿ ಮುನಿಯಪ್ಪನಿಗೆ 6 ತಿಂಗಳ ಸರಳ ಕಾರಾಗೃಹ ಶಿಕ್ಷೆ ಹಾಗೂ ಮುನಿಯಮ್ಮಗೆ 2 ತಿಂಗಳ ಸರಳ ಕಾರಾಗೃಹ ಶಿಕ್ಷೆ ಮತ್ತು 1,000 ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಟಿ.ಎನ್. ನಟರಾಜ್ ಅವರು ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆಯ ಮೇಲ್ವಿಚಾರಣೆಯನ್ನು ಅಭಿಯೋಜನಾ ಇಲಾಖೆಯ ಅಧಿಕಾರಿಗಳು ನಡೆಸಿದ್ದರು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Ramesh Babu

Journalist

Recent Posts

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

3 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

6 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

17 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

23 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago