ಮೇ 04 ರಂದು NEET ಪರೀಕ್ಷೆ: ದೊಡ್ಡಬಳ್ಳಾಪುರದಲ್ಲಿ ನಾಲ್ಕು ಪರೀಕ್ಷಾ ಕೇಂದ್ರ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

2025 ನೇ ಸಾಲಿನಲ್ಲಿ ವೈದ್ಯಕೀಯ ಪ್ರವೇಶಾತಿ ಕಲ್ಪಿಸಲು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET)ಯು ರಾಜ್ಯಾದ್ಯಂತ ಮೇ 4 ರಂದು ನಡೆಯುತ್ತಿದ್ದು ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ NEET-2025 ಪರೀಕ್ಷೆ ಸಂಬಂಧ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಗಾಧರಪುರ ಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು, ಮಾದಗೊಂಡನಹಳ್ಳಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಾಲ್ಲೂಕು ಆಫೀಸ್ ರಸ್ತೆಯ ಸರ್ಕಾರಿ ಪದವಿ ಕಾಲೇಜು(ಪ್ರೌಢಶಾಲಾ ವಿಭಾಗ) ಈ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ NEET ಪರೀಕ್ಷೆ ನಡೆಯಲಿದೆ.

ಆ ದಿನ ಮಧ್ಯಾಹ್ನ 2:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 01.30 ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್‌ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳ ಸಹಿತ ಹಾಜರಾಗಬೇಕು.

ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ತೆರಳಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ಪ್ರವೇಶ ಪತ್ರದಲ್ಲಿ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು.

NEET ಪರೀಕ್ಷೆಯು ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಸಿದ್ದತೆ ಕೈಗೊಳ್ಳಲಾಗಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಲು ನಾಲ್ಕು ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಭದ್ರತೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್ ವ್ಯವಸ್ಥೆ, ಸಿ.ಸಿ ಕ್ಯಾಮೆರಾ ಅಳವಡಿಕೆ, ಆಂಬುಲೆನ್ಸ್ ಸೇವೆ , ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ಅಂಗವಿಕಲರು, ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವೀಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಅಗ್ನಿಶಾಮಕ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮ ವಹಿಸಿ ಎಂದು ಅಧಿಕಾರಿಗಳು ಸೂಚಿಸಿದರು. ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಮಾರ್ಗಸೂಚಿ ಅನ್ವಯ ಕಾರ್ಯನಿರ್ವಹಿಸಿ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮೋಹನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರರಾದ ಬೈಲಾಂಜನಪ್ಪ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

5 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

6 hours ago

“ಬದುಕಿನ ಬೆಳದಿಂಗಳು”

ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…

7 hours ago

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…

8 hours ago

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…

9 hours ago

ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…

10 hours ago