ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ ಬಂದ್ ಅನ್ನು ಬೆಂಬಲಿಸಲಾಗುವುದು ಎಂದು ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಟಿ.ಡಿ.ಶ್ಯಾಮ್ ಸುಂದರ್ ತಿಳಿಸಿದ್ದಾರೆ.
ಸೋಮವಾರ ಸಂಘದ ವತಿಯಿಂದ ನಗರದಲ್ಲಿನ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಬಂದ್ ಕುರಿತು ಮಾಹಿತಿ ನೀಡಿದ ಅವರು, ದೇಶದಲ್ಲಿ ಸುಮಾರು 12.40 ಲಕ್ಷಕ್ಕೂ ಹೆಚ್ಚು ಔಷಧ ವ್ಯಾಪಾರಿಗಳಿದ್ದು, ಆನ್ಲೈನ್ ಪೋರ್ಟಲ್ ಗಳ ಅನಿಯಂತ್ರಿತ ಕಾರ್ಯನಿರ್ವಹಣೆಯಿಂದ ಸಣ್ಣ ಹಾಗೂ ಮಧ್ಯಮ ಮಟ್ಟದ ಔಷಧ ಅಂಗಡಿಗಳ ಮೇಲೆ ಪರಿಣಾಮ ಬೀರುತ್ತಿದೆ. ಇ-ಫಾರ್ಮಸಿ ಪೋರ್ಟಲ್ಗಳು ಭಾರಿ ಪ್ರಮಾಣದ ರಿಯಾಯಿತಿ ನೀಡಿ ಔಷಧ ಮಾರಾಟ ಮಾಡುತ್ತಿರುವುದು ಸ್ಥಳೀಯ ವ್ಯಾಪಾರಿಗಳಿಗೆ ಸಂಕಷ್ಟ ತಂದೊಡ್ಡುತ್ತಿದೆ. ಕೋವಿಡ್-19 ಸಮಯದಲ್ಲಿ ಜಾರಿಯಾದ ತಾತ್ಕಾಲಿಕ ಆದೇಶಗಳನ್ನು ದುರುಪಯೋಗಪಡಿಸಿಕೊಂಡು ಇ-ಫಾರ್ಮಸಿ ಕಂಪನಿಗಳು ವ್ಯಾಪಾರ ವಿಸ್ತರಣೆ ಮಾಡಿಕೊಂಡಿವೆ. ವೈದ್ಯರು ನೀಡುವ ಚೀಟಿ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡುವುದರಿಂದ ಗ್ರಾಹಕರ ಆರೋಗ್ಯಕ್ಕೂ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು.
ಅನಿಯಂತ್ರಿತ ಆನ್ಲೈನ್ ಔಷಧ ಮಾರಾಟದಿಂದ ರೋಗನಿರೋಧಕ ಔಷಧಿಗಳ ದುರ್ಬಳಕೆ ಹೆಚ್ಚಾಗಿ ಅಡ್ಡ ಪರಿಣಾಮದಗಳ ಸಮಸ್ಯೆ ತೀವ್ರವಾಗುತ್ತಿವೆ. ವೈದ್ಯರ ಸಲಹೆ ಇಲ್ಲದೆ ಔಷಧ ಲಭ್ಯವಾಗುತ್ತಿರುವುದು ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದರು.
ಆನ್ಲೈನ್ ಔಷಧಿ ಮಾರಾಟದಿಂದ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆ ಉಲ್ಲಂಘನೆಯಾಗುತ್ತಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು ಇ-ಫಾರ್ಮಸಿ ನಿಯಂತ್ರಣಕ್ಕೆ ಸ್ಪಷ್ಟ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಸಂಘದ ಸಂಸ್ಥಾಪಕ ಅಧ್ಯಕ್ಷ ಎನ್.ಸಿ.ಪಟಾಲಯ್ಯ ಮಾಹಿತಿ ನೀಡಿ,ವೈದ್ಯರಷ್ಟೇ ಮುಖ್ಯವಾಗಿರುವುದು ಔಷಧ ಮಾರಾಟಗಾರರು ಸಹ. ಬಂದ್ ವೇಳೆ ಖಾಸಗಿ ಆಸ್ಪತ್ರೆಗಳಲ್ಲಿನ ಔಷಧಿ ಮಾರಾಟ ಮಳಿಗೆಗಳು ತೆರೆದಿದ್ದು, ಪ್ರತಿ ನಿತ್ಯದಂತ ಔಷಧಿಗಳ ಮಾರಾಟ ಮಾಡಲಿವೆ. ರೋಗಿಗಳಿಗೆ ಔಷಧಿಗಳ ತುರ್ತು ಅಗತ್ಯ ಇದ್ದರೆ ಕರೆ ಮಾಡುವಂತೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ವೈದ್ಯರಿಗೆ ಸಮೀಪದ ಔಷಧಿ ಮಾರಾಟಗಾರರ ಮೊಬೈಲ್ ನಂಬರ್ಗಳನ್ನು ನೀಡಲಾಗಿದೆ ಎಂದರು.
ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡಲಾದ ಮನವಿ ಸ್ವೀಕರಿಸಿದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಮಂಜುನಾಥ್ ‘ಔಷಧಿ ಮಾರಾಟ ಮಳಿಗೆಗಳ ಬಂದ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಹಾಗೂ ಎಚ್ಚರ ವಹಿಸಬೇಕು’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಡಿ.ಎಸ್.ಸಿದ್ದಣ್ಣ, ಕಾರ್ಯದರ್ಶಿ ಸಿ.ರಜನೀಶ್, ಖಜಾಂಚಿ ರಹೀಂಖಾನ್, ಉಪಾಧ್ಯಕ್ಷ ಚಂದ್ರಣ್ಣ, ಕೆ.ಎಸ್.ಅಭಿಜಿತ್, ಮುರಳಿ, ಚಂದ್ರಶೇಖರ್, ರಂಗನಾಥ್, ರಾಮಕೃಷ್ಣ ಇದ್ದರು.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…