ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನ ಸಾಮಾನ್ಯರ ಅನುಕೂಲಕ್ಕಾಗಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಯೋಜನೆ ಮಾಡಲಾಗಿದೆ.
ಈ ಹಿನ್ನೆಲೆ ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ. ಅರ್ಹವಿರುವ ಒಟ್ಟು 67 ಜೋಡಿಗಳ ಪಟ್ಟಿಯನ್ನು ಅಂತಿಮಗೊಳಿಸಿ, ಪ್ರಕಟಿಸಲಾಗಿದೆ.
ವಧು-ವರರ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ದೇವಾಲಯದ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಕೊಳ್ಳಬೇಕಾಗಿದೆ ಎಂದು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.
ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ರೂ. ಹಾಗೂ ವಧುವಿಗೆ 10ಸಾವಿರ ರೂ. ಜೊತೆಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು (ರೂ. 48,000/- ಮೌಲ್ಯದ್ದು) ಹೀಗೆ ಒಟ್ಟು 63 ಸಾವಿರ ರೂ.ಗಳನ್ನು ಅಭಿವೃದ್ಧಿ ಪ್ರಾಧಿಕಾರ ನಿಧಿಯಿಂದ ಭರಿಸಲಾಗುತ್ತದೆ.
ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಮಾಡಲಾಗುತ್ತದೆ.