ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನ ಸಾಮಾನ್ಯರ ಅನುಕೂಲಕ್ಕಾಗಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಯೋಜನೆ ಮಾಡಲಾಗಿದೆ.

ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ರೂ. ಹಾಗೂ ವಧುವಿಗೆ 10ಸಾವಿರ ರೂ. ಜೊತೆಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು (ರೂ. 48,000/- ಮೌಲ್ಯದ್ದು) ಹೀಗೆ ಒಟ್ಟು 63 ಸಾವಿರ ರೂ.ಗಳನ್ನು ಅಭಿವೃದ್ಧಿ ಪ್ರಾಧಿಕಾರ ನಿಧಿಯಿಂದ ಭರಿಸಲಾಗುತ್ತದೆ.

ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಮಾಡಲಾಗುತ್ತದೆ.

ಮೇ.7ರಂದು ನಡೆಯಲಿರುವ ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಅರ್ಜಿಯನ್ನು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳ ಕಚೇರಿಯಲ್ಲಿ ಪಡೆದು ನಿಗದಿತ ದಿನಾಂಕದೊಳಗೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.

ಪ್ರಮುಖ ದಿನಾಂಕಗಳು

  • ಮಾರ್ಚ್ 31ಕ್ಕೆ ವಧು-ವರರು ನೋಂದಾಯಿಸಿಕೊಳ್ಳಲು ಕಡೆಯ ದಿನವಾಗಿರುತ್ತದೆ.
  • ಏಪ್ರಿಲ್ 10ರಂದು ನೋಂದಾಯಿಸಿಕೊಂಡಿರುವ ವಧು-ವರರ ವಿವರಗಳನ್ನು ದೇವಾಲಯದಲ್ಲಿ ಪ್ರಕಟಿಸಲಾಗುತ್ತದೆ.
  • ಏಪ್ರಿಲ್ 20ರಂದು ವಧು-ವರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಡೆಯ ದಿನವಾಗಿರುತ್ತದೆ.
  • ಏಪ್ರಿಲ್.25ರಂದು ಅಂತಿಮ ವಧು-ವರರ ಪಟ್ಟಿ ಪ್ರಕಟಿಸಲಾಗುತ್ತದೆ.
  • ಮೇ.7ರ ಬೆ. 11-00 ರಿಂದ 12-00 ರವರೆಗೆ ಕಟಕ ಲಗ್ನದಲ್ಲಿ ವಿವಾಹ ನಡೆಯುತ್ತದೆ.

ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸಬೇಕಾದ ದೃಢೀಕೃತ ದಾಖಲೆ ವಿವರ

  • ವಧು / ವರರ ಪಾಸ್ ಪೋರ್ಟ್ ಅಳತೆಯ ಫೋಟೋಗಳು 2+2
  • ವಧು / ವರರ ವಯಸ್ಸಿನ ಬಗ್ಗೆ ದಾಖಲೆಗಳ 4+4 ಪ್ರತಿಗಳು(ಜನನ ಪ್ರಮಾಣ ಪತ್ರ / ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ)
  • ವಧು / ವದರ ವಾಸ ಸ್ಥಳದ ಬಗ್ಗೆ ಅಧಿಕೃತ ದಾಖಲೆಗಳ 4+4 ಪ್ರತಿಗಳು (ಪಡಿತರ ಚೀಟಿ ನಕಲು)
  • ಅವಿವಾಹಿತರೆನ್ನುವ ಬಗ್ಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು / ಪಿ.ಡಿ.ಒ. / ನಗರಸಭೆ / ಪುರಸಭೆ / ಮಾಹಾನಗರ ಪಾಲಿಕೆಯಿಂದ ಪತ್ರಗಳ(1+1 ಪ್ರತಿಗಳು)
  • ವಿವಾಹವಾಗುವ ವಧು / ವರರ ಚುನಾವಣಾ ಗುರುತಿನ ಚೀಟಿ / ಆಧಾರ್ ಕಾರ್ಡ್ (4+4 ನಕಲು ಪ್ರತಿಗಳು)
  • ವಿವಾಹವಾಗುವ ವಧು / ವರರ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ನಕಲು ಪ್ರತಿಗಳು
  • ವಧು / ವರರ ತಂದೆ ತಾಯಿಯರು ನಿಧನರಾಗಿದ್ದಲ್ಲಿ ಮರಣ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಒದಗಿಸತಕ್ಕದ್ದು
  • ವಧು / ವರರ ತಂದೆ ತಾಯಿಯರ / ಪೋಷಕರ ಗುರುತಿನ ಚೀಟಿ ( ಚುನಾವಣಾ ಗುರುತಿನ ಚೀಟಿ / ಆಧಾರ್ ಕಾರ್ಡ್ ಹಾಗೂ ಸರ್ಕರ ನೀಡಿರುವ ಅಧಿಕೃತ ದಾಖಲೆಗಳು)
Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

9 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

15 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

16 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

19 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

20 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 days ago