ಮೈಕ್ರೋ ಫೈನಾನ್ಸ್ ಗಳಿಂದ ಕಿರುಕುಳ ಆಗುತ್ತಿದೆಯೇ?: ಹಾಗಾದ್ರೆ 112 ಸಂಖ್ಯೆಗೆ ಕರೆ ಮಾಡಿ

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಾತಿಗಾಗಿ ಕಿರುಕುಳ ನೀಡುವುದು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡುವಂತೆ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಯಕ್ತಿಕ ಹಾಗೂ ಜಂಟಿ ಸಾಲವನ್ನು ನೀಡಿ ಸಾಲ ಮರು ಪಾವತಿ ಮಾಡುವ ಸಂದರ್ಭ ದೈಹಿಕ ಹಲ್ಲೆ, ಅವಾಚ್ಯ ಪದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸಿರುವ ಕುರಿತು ಮಾಹಿತಿ ಬಂದಿದೆ. ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಜನರಿಗೆ ಹಲ್ಲೆ ನಡೆಸುವುದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.

ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಹಲ್ಲೆ ಮಾಡುವುದು, ಜಗಳ ಮಾಡುವುದು ಮತ್ತು ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಮತ್ತು ಕೆ.ಎಸ್.ಪಿ. ತಂತ್ರಾಂಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕ ರಲ್ಲಿ ಕೋರಲಾಗಿದೆ ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!