ಮೈಗೆ ಎಣ್ಣೆ ಬಳಿದುಕೊಂಡು ಬರಿ ಮೈನಲ್ಲಿ ಕಳ್ಳತನ: ಯಾರು ಹಿಡಿಯಬಾರದು ಎಂದು ದೇಹಕ್ಕೆ ಎಣ್ಣೆ ಬಳಿದಿಕೊಂಡಿರುವ ಕಳ್ಳರು: ಮನೆಯಲ್ಲಿದ್ದ 95 ಗ್ರಾಂ ಚಿನ್ನ, 1.50 ಲಕ್ಷ ನಗದು ದೋಚಿ ಪರಾರಿ

ಮೈಗೆ ಎಣ್ಣೆ ಬಳಿದುಕೊಂಡು ಬರಿ ಮೈಯಲ್ಲಿ ಕಳ್ಳತನಕ್ಕೆ ಬಂದಿದ್ದ ನಾಲ್ಕು‌ ಮಂದಿ ಖದೀಮರು, ಯಾರು ಇಲ್ಲದ ಮನೆಗೆ ನುಗ್ಗಿ ಮನೆಯಲ್ಲಿದ್ದ 95 ಗ್ರಾಂ ಚಿನ್ನ, 1.50 ಲಕ್ಷ ನಗದು ದೋಚಿ ಪರಾರಿಯಾಗಿರುವ ಘಟನೆ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ.

ರಾಯದುರ್ಗ ಮೂಲದ ಹನುಮಂತರೆಡ್ಡಿ ಎಂಬುವವರ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.

ಕಳ್ಳತನದ ಸಮಯದಲ್ಲಿ ಆಕಸ್ಮಿಕವಾಗಿ ಸಿಕ್ಕಿಬಿದ್ದರೆ ಯಾರೂ ಹಿಡಿಯಬಾರದು ಎಂದು ಮೈಗೆ ಎಣ್ಣೆ ಬಳಿದುಕೊಂಡು ಬರೀ ಮೈ ನಲ್ಲಿ ಬಂದು ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿ, ಚಿನ್ನ, ನಗದು ದೋಚಿ ಪರಾರಿಯಾಗಿದ್ದಾರೆ.

ಕಳ್ಳರು ಬರಿ ಮೈಯಲ್ಲಿ ಬರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನೆಲಮಂಗಲ ನಗರ  ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

3 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

13 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

15 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

17 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

22 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

1 day ago