ಕೋಲಾರ: ದೇಶದಲ್ಲಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿ ಆಗಬೇಕು ಅನ್ನುವುದು ನಮ್ಮ ಎಲ್ಲರ ಗುರಿಯಾಗಿದ್ದು, ಅನಿಟ್ಟಿನಲ್ಲಿ ಎಚ್.ಡಿ ಕುಮಾರಸ್ವಾಮಿ ಸಹ ದುಡಿಯುತ್ತಾ ಇದ್ದು ಅವರ ಕೈಬಲಪಡಿಸಲು ಮೈತ್ರಿಕೂಟ ಜೆಡಿಎಸ್ ಅಭ್ಯರ್ಥಿಯನ್ನು ಕೂಡಲೇ ಘೋಷಿಸುವಂತೆ ಜಿಲ್ಲಾ ಜೆಡಿಎಸ್ ಎಸ್ಸಿ ಘಟಕದ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋಲಾರ ಮೀಸಲು ಲೋಕಸಭಾ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು ಇದ್ದು ಮೂರು ಕಡೆ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಉಳಿದ ಐದು ಕಡೆ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಸ್ಪರ್ಧಿಯಾಗಿ ಎರಡನೇ ಸ್ಥಾನವನ್ನು ಜೆಡಿಎಸ್ ಪಕ್ಷವು ಪಡೆದಿದೆ ಅದರಿಂದ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದರೆ ಗೆಲುವು ಸಾಧಿಸಬಹುದು ಅನಿಟ್ಟಿನಲ್ಲಿ ವರಿಷ್ಠರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಮುಖ್ಯಮಂತ್ರಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಆಗಿರುವ ಎಚ್.ಡಿ ಕುಮಾರಸ್ವಾಮಿ ಅವರು ಚೆನ್ನೈನಲ್ಲಿ ಮೂರನೇ ಬಾರಿ ಹೃದಯ ಚಿಕಿತ್ಸೆಗೆ ಒಳಗಾಗಿದ್ದು ಅವರು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ರಾಜ್ಯದ ಬಡವರ ದಲಿತರ, ಮಹಿಳೆಯರ, ರೈತರ ಕಷ್ಟಗಳಿಗೆ ಧ್ವನಿಯಾಗಿ ಕೆಲಸ ಮಾಡುವಂತ ಅವಕಾಶವನ್ನು ದೇವರು ಆಶೀರ್ವಾದ ನೀಡಲಿ ಎಂದು ಯಲುವಗುಳಿ ನಾಗರಾಜ್ ಆಶಿಸಿದರು.