Categories: ಕೋಲಾರ

ಮೈತ್ರಿಕೂಟದಿಂದ ಜೆಡಿಎಸ್‌ ಅಭ್ಯರ್ಥಿ ಘೋಷಣೆಗೆ ಒತ್ತಾಯ

ಕೋಲಾರ: ದೇಶದಲ್ಲಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿ ಆಗಬೇಕು ಅನ್ನುವುದು ನಮ್ಮ ಎಲ್ಲರ ಗುರಿಯಾಗಿದ್ದು, ಅನಿಟ್ಟಿನಲ್ಲಿ ಎಚ್.ಡಿ ಕುಮಾರಸ್ವಾಮಿ ಸಹ ದುಡಿಯುತ್ತಾ ಇದ್ದು ಅವರ ಕೈಬಲಪಡಿಸಲು ಮೈತ್ರಿಕೂಟ ಜೆಡಿಎಸ್‌ ಅಭ್ಯರ್ಥಿಯನ್ನು ಕೂಡಲೇ ಘೋಷಿಸುವಂತೆ ಜಿಲ್ಲಾ ಜೆಡಿಎಸ್‌ ಎಸ್ಸಿ ಘಟಕದ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋಲಾರ ಮೀಸಲು ಲೋಕಸಭಾ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು ಇದ್ದು ಮೂರು ಕಡೆ ಜೆಡಿಎಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಉಳಿದ ಐದು ಕಡೆ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಸ್ಪರ್ಧಿಯಾಗಿ ಎರಡನೇ ಸ್ಥಾನವನ್ನು ಜೆಡಿಎಸ್‌ ಪಕ್ಷವು ಪಡೆದಿದೆ ಅದರಿಂದ ಮೈತ್ರಿಕೂಟದಿಂದ ಜೆಡಿಎಸ್‌ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದರೆ ಗೆಲುವು ಸಾಧಿಸಬಹುದು ಅನಿಟ್ಟಿನಲ್ಲಿ ವರಿಷ್ಠರು ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಬೇಕು ಎಂದು ಒತ್ತಾಯಿಸಿದರು.

ಮಾಜಿ ಮುಖ್ಯಮಂತ್ರಿ ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷರು ಆಗಿರುವ ಎಚ್.ಡಿ ಕುಮಾರಸ್ವಾಮಿ ಅವರು ಚೆನ್ನೈನಲ್ಲಿ ಮೂರನೇ ಬಾರಿ ಹೃದಯ ಚಿಕಿತ್ಸೆಗೆ ಒಳಗಾಗಿದ್ದು ಅವರು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ರಾಜ್ಯದ ಬಡವರ ದಲಿತರ, ಮಹಿಳೆಯರ, ರೈತರ ಕಷ್ಟಗಳಿಗೆ ಧ್ವನಿಯಾಗಿ ಕೆಲಸ ಮಾಡುವಂತ ಅವಕಾಶವನ್ನು ದೇವರು ಆಶೀರ್ವಾದ ನೀಡಲಿ ಎಂದು ಯಲುವಗುಳಿ ನಾಗರಾಜ್ ಆಶಿಸಿದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

50 minutes ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

13 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

15 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

17 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

17 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

19 hours ago