ಕೋಲಾರ: ಮುಂಬರುವ ಕೋಲಾರ ಮೀಸಲು ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟದಿಂದ ಜೆಡಿಎಸ್ ಅಭ್ಯರ್ಥಿಯನ್ನು ಕೂಡಲೇ ವರಿಷ್ಠರು ಘೋಷಣೆ ಮಾಡಿದರೆ ಗೆಲ್ಲಲು ಸುಲಭವಾಗುತ್ತದೆ ಎಂದು ಜೆಡಿಎಸ್ ಎಸ್ಸಿ ಘಟಕದ ತಾಲೂಕ ಅಧ್ಯಕ್ಷ ಲಕ್ಷ್ಮೀಸಾಗರ ಜಿ.ಸುನಿಲ್ ಕುಮಾರ್ ಅವರು ಜೆಡಿಎಸ್ ವರಿಷ್ಠರನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ಈಗಾಗಲೇ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳು ಮೈತ್ರಿಯಾಗಿ ಚುನಾವಣೆಯನ್ನು ಎದುರಿಸಲು ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ನಿರ್ಧಾರವು ಒಳ್ಳೆಯ ಬೆಳವಣಿಗೆಯಾಗಿದೆ. ಈಗಾಗಲೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಜೆಡಿಎಸ್ ಪಕ್ಷದಿಂದಲ್ಲೇ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಕಾರ್ಯಕ್ರಮ ಒಂದರಲ್ಲಿ ಹೇಳಿದ್ದಾರೆ. ಅದರಂತೆ ಕೂಡಲೇ ಅಭ್ಯರ್ಥಿಯನ್ನು ಘೋಷಣೆ ಮಾಡಿದರೆ ಮೈತ್ರಿಕೂಟದಿಂದ ಮತದಾರರನ್ನು ಸಂಪರ್ಕಿಸಲು ಸಹಕಾರಿಯಾಗುತ್ತದೆ ಎಂದರು.
ಈಗಾಗಲೇ ಮೈತ್ರಿಕೂಟದಲ್ಲಿ ಬಿಜೆಪಿಯ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಕೋಲಾರ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡದಿದರೆ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರಿಗೆ ನರೇಂದ್ರ ಮೋದಿ ಹಾಗೂ ಎಚ್ ಡಿ ಕುಮಾರಸ್ವಾಮಿ ಅವರ ಆಡಳಿತದ ಜನಪರ, ರೈತ ಮಹಿಳೆಯರ ಪರವಾದ ಯೋಜನೆಗಳ ಬಗ್ಗೆ ಮನವರಿಕೆ ಮಾಡಿ ಎರಡು ಪಕ್ಷಗಳ ಕಾರ್ಯಕರ್ತರಲ್ಲಿ ಸಮನ್ವಯತೆ ಸಾಧಿಸಿಕೊಂಡು ಮತ ಪಡೆಯಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಕೂಡಲೇ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು ಎಂದು ಜಿ.ಸುನಿಲ್ ಕುಮಾರ್ ವರಿಷ್ಠರನ್ನು ಒತ್ತಾಯಿಸಿದರು.
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…