ಕೋಲಾರ: ಮೀಸಲು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿ ಸಿಗಲಿಲ್ಲ ಎಂಬ ನೋವು ಕಾರ್ಯಕರ್ತರಲ್ಲಿ ಇದ್ದರೂ ಕೂಡ ನರೇಂದ್ರ ಮೋದಿಯವರನ್ನು ದೇಶದಲ್ಲಿ ಸತತವಾಗಿ ಮೂರನೇ ಬಾರಿಗೂ ಪ್ರಧಾನಿಯಾಗಿ ಮಾಡಲು ಪಕ್ಷದ ಹೈಕಮಾಂಡ್ ನಿರ್ಧಾರದಂತೆ ಈ ಬಾರಿ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ನಗರದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಸಂಸದರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಈ ಬಾರಿ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಪಕ್ಷದಿಂದ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡಿದ್ದು, ಯಾರೇ ಅಭ್ಯರ್ಥಿಯಾದರೂ ಮೈತ್ರಿ ಧರ್ಮವನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಪಾಲಿಸಲಿದ್ದಾರೆ ಈ ಬಾರಿಯ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ ಮೈತ್ರಿಕೂಟದಿಂದ 400 ಸೀಟುಗಳ ಗುರಿಯನ್ನು ಹೊಂದಿದ್ದು ಅದರಲ್ಲಿ ಕೋಲಾರ ಕ್ಷೇತ್ರವು ಒಂದಾಗಿದ್ದು ಅನಿಟ್ಟಿನಲ್ಲಿ ಮೈತ್ರಿಕೂಟದಿಂದ ನರೇಂದ್ರ ಮೋದಿಯವರನ್ನು ಬೆಂಬಲಿಸಲು ಕಾರ್ಯಕರ್ತರು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಕೆಲವು ನಾಯಕರಿಗೆ ಮೋದಿಯವರನ್ನು ಟೀಕೆ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಟಾಸ್ಕ್ ನೀಡಿದ್ದಾರೆ. ಅವರ ಹಣತೆಯಂತೆ ನಡೆದುಕೊಳ್ಳುತ್ತಾ ಇದ್ದು ಮೋದಿ ಅವರ ವಿರುದ್ದ ದಿನನಿತ್ಯ ಮಾತಾಡಿಲ್ಲ ಎಂದರೆ ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಬೆಲೆ ಕಡಿಮೆಯಾಗುತ್ತದೆ. ದೇಶದಲ್ಲಿ 80% ಯುವಕರು ಮೋದಿಯನ್ನು ಬೆಂಬಲಿಸುತ್ತಾರೆ ಎಂಬ ಉದ್ದೇಶಕ್ಕಾಗಿ ಸಚಿವ ಶಿವರಾಜ್ ತಂಗಡಿಗಿ ಮೋದಿ ಎಂದರೆ ಕಪಾಳಕ್ಕೆ ಹೊಡಿರಿ ಅಂತ ಮಾತಾಡಿದ್ದಾರೆ. ಅವರಿಗೆ ತಾಕತ್ತು ಇದ್ದರೆ ಬಿಜೆಪಿಯ ಹಾಗೂ ಹಿಂದುತ್ವದ ಒಬ್ಬ ಕಾರ್ಯಕರ್ತರನ್ನು ಮುಟ್ಟಿ ನೋಡಲಿ ಎಂದು ಸವಾಲು ಹಾಕಿದರು.
ಈ ಬಾರಿ ರಾಜ್ಯದಲ್ಲಿ ಮೈತ್ರಿಕೂಟದಿಂದ 28 ಕ್ಷೇತ್ರಗಳಲ್ಲೂ ಗೆಲ್ಲಲಿದ್ದಾರೆ. ದೇಶವು ಸುಭದ್ರವಾಗಿ ಇರಲು ಮೋದಿಯವರ ಅಭಿವೃದ್ಧಿ, ಜನಪ್ರಿಯ ಯೋಜನೆಗಳ ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರ ಹಾಗೂ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಅವರ ಹಾದಿಯಲ್ಲಿ ಎಲ್ಲಾ ಕಡೆ ಗೆಲ್ಲಲಿದ್ದೇವೆ. ರಾಜ್ಯದಲ್ಲಿ ಕೆ.ಎಸ್ ಈಶ್ವರಪ್ಪ ಹಾಗೂ ಎಸ್.ಆರ್ ವಿಶ್ವನಾಥ್ ಅವರನ್ನು ಪಕ್ಷವು ಗೌರವಯುತವಾಗಿ ನಡೆಸಿಕೊಳ್ಳಲಿದೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಒಗ್ಗಟ್ಟಿನಿಂದ ಮೋದಿ ಗೆಲ್ಲಿಸಿ ದೇಶವನ್ನು ಗೆಲ್ಲಿಸುವ ಕೆಲಸ ಮಾಡತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…