Categories: ಕೋಲಾರ

ಮೈತ್ರಿ ಪಕ್ಷದ ನಾಯಕತ್ವ ಬೇಸತ್ತು ಶಿವಕುಮಾರ್ ಕಾಂಗ್ರೆಸ್ ಸೇರ್ಪಡೆ

ಕೋಲಾರ: ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷದ ಮುಖಂಡರ ನಾಯಕತ್ವದ ವಿರುದ್ದ ಬೇಸತ್ತು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಕೆಂದಟ್ಟಿ ಎ.ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಹೊರತು ಯಾವುದೇ ಹಣದ ಆಮಿಷಗಳಿಗೆ ಒಳಗಾಗಿ ಪಕ್ಷಕ್ಕೆ ಬಂದಿಲ್ಲ ಆಮಿಷಗಳಿಂದ ಪಕ್ಷ ಸೇರ್ಪಡೆ ಏನಾದರೂ ಇದ್ದರೆ ಅದು ಮೈತ್ರಿ ಪಕ್ಷದಲ್ಲಿ ಮಾತ್ರವೇ ಎಂದು ಬಣಕನಹಳ್ಳಿ ನಟರಾಜ್ ಹೇಳಿಕೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೈಲಾಂಡಹಳ್ಳಿ ಮುರಳಿ ಟಾಂಗ್ ನೀಡಿದ್ದಾರೆ

ಈ ಕುರಿತು ಪತ್ರಿಕ ಹೇಳಿಕೆ ನೀಡಿದ ಅವರು ಅಧಿಕಾರದ ಆಸೆ ಆಮಿಷಗಳಿಗೆ ಸೇರ್ಪಡೆ ಮಾಡಿಕೊಳ್ಳುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ ನೂತನ ಅಧ್ಯಕ್ಷ ಶಿವಕುಮಾರ್ ಅವರ ಹಿನ್ನಲೆಯನ್ನು ತಿಳಿದು ಬಣಕನಹಳ್ಳಿ ನಟರಾಜ್ ಮಾತನಾಡಬೇಕು ಅವರ ರಾಜಕೀಯ ಜೀವನದಲ್ಲಿ ಯಾವತ್ತೂ ಅಧಿಕಾರ ಹಣದ ಆಮಿಷಗಳಿಗೆ ಒಳಗಾಗುವ ವ್ಯಕ್ತಿಯಲ್ಲ ಮೈತ್ರಿ ಪಕ್ಷದಲ್ಲಿನ ನಾಯಕರು ಮುಖಂಡರು ವರ್ತನೆ ಸರಿ ಇಲ್ಲದ ಕಾರಣ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಸೇರ್ಪಡೆಯಾಗಿದ್ದಾರೆ ಮೂರು ಬಾರಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಸಾಧ್ಯವಾದಷ್ಟು ರೈತರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಮಾಡಿದ್ದಾರೆ ಅಂತಹವರಿಗೆ ಅವಕಾಶ ಸಿಗಲಿಲ್ಲ ಕಾಂಗ್ರೆಸ್ ಪಕ್ಷವು ಅವರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ

ಕಾಂಗ್ರೆಸ್ ಪಕ್ಷವು ಯಾವತ್ತೂ ಕೂಡ ತಾಲೂಕು ಸೊಸೈಟಿ, ಪಿಎಲ್ಡಿ ಬ್ಯಾಂಕ್, ಮತ್ತು ಸಹಕಾರಿ ಸಂಸ್ಥೆಗಳ ಚುನಾವಣೆಗಳನ್ನು ಗಂಭೀರವಾಗಿ ತೆಗೆದುಕೊಂಡು ಇರಲಿಲ್ಲ ಕೋಲಾರದಲ್ಲಿ ಶಾಸಕರಾಗಿ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿಯಾಗಿ ಅನಿಲ್ ಕುಮಾರ್ ಅವರು ಬಂದ ನಂತರದಲ್ಲಿ ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಹೋರಾಟ ಮಾಡಿ ಮೈತ್ರಿ ಪಕ್ಷಗಳ ಮಧ್ಯೆ ಗೆಲ್ಲಿಸಿಕೊಂಡಿದ್ದಾರೆ ಹಿಂದಿನ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಅವಿರೋಧ ಅಂತ ಹೇಳಿ ಬಲಿಷ್ಠ ವ್ಯಕ್ತಿಗಳನ್ನು ಚುನಾವಣಾ ಕಣದಿಂದ ಸರಿಸಿದ್ದರು ಇಲ್ಲದೇ ಹೋಗಿದ್ದರೆ ತಾಲೂಕು ಸೊಸೈಟಿಯಲ್ಲಿ ಸಹ ಕಾಂಗ್ರೆಸ್ ಪಕ್ಷವು ಕೈಹಿಡಿಯುತ್ತಿದ್ದರು ಎಂಬುದನ್ನು ಮೈತ್ರಿ ಪಕ್ಷದ ಮುಖಂಡರಿಗೆ ಮನವರಿಕೆಯಾಗಬೇಕು ಎಂದರು

ಸುಮಾರು ಹತ್ತು ವರ್ಷಗಳ ಕಾಲ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ವರ್ತೂರ್ ಪ್ರಕಾಶ್ ಶಾಸಕರಾಗಿ ಸಚಿವರಾಗಿದ್ದ ಸಂದರ್ಭದಲ್ಲಿ ಯಾವತ್ತೂ ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಲಿಲ್ಲ ಮಾಜಿ ಸಚಿವರಾದ ಸಿ.ಬೈರೇಗೌಡರು ಹಾಗೂ ಕೆ ಶ್ರೀನಿವಾಸಗೌಡರು ಸಹಕಾರಿ ವ್ಯವಸ್ಥೆಗೆ ಹಾಕಿದ ಅಡಿಪಾಯದಲ್ಲಿ ಜೆಡಿಎಸ್‌ ನವರು ಗೆದ್ದು ಬೀಗುತ್ತಿದ್ದಾರೆ ಇದು ಇವತ್ತಿನ ಜೆಡಿಎಸ್‌ ನಲ್ಲಿರುವ ಸಿಎಂಆರ್ ಶ್ರೀನಾಥ್ ಹಾಗೂ ಇನ್ನಿತರ ಮುಖಂಡರು ಹಾಗೂ ಪರದೆ ಹಿಂದೆ ಮುಖವಾಡ ಹಾಕಿಕೊಂಡು ಇರುವವರ ಮುಖಂಡರ ಗೆಲುವು ಅಲ್ಲ ಇವತ್ತು ಮೈತ್ರಿಯಾಗಿ ಅಭ್ಯರ್ಥಿಯಾಗಿ ಪೈಪೋಟಿಯನ್ನು ನೀಡಿದ್ದರೂ ಕಾಂಗ್ರೆಸ್ ಹೆಚ್ಚು ಸ್ಥಾನಗಳು ಪಡೆಯಲು ಸಾಧ್ಯವಾಯಿತು ಮೂರು ಪಕ್ಷಗಳು ಏಕಾಂಗಿಯಾಗಿ ಸ್ಪರ್ಧೆಯಲ್ಲಿ ಇದ್ದಿದ್ದರೆ ಕಾಂಗ್ರೆಸ್ ಸುಲಭವಾಗಿ ಗೆಲ್ಲುತ್ತಿತ್ತು ಆರೋಪ ಮಾಡುವ ಸಂದರ್ಭದಲ್ಲಿ ತಮ್ಮ ಮೈತ್ರಿ ಪಕ್ಷದ ನಡುವಳಿಕೆ ಬಗ್ಗೆ ಅತ್ಮವಿಮರ್ಶೆ ಮಾಡಿಕೊಳ್ಳುವುದು ಸೂಕ್ತ ಎಂದು ಮೈಲಾಂಡಹಳ್ಳಿ ಮುರಳಿ ಹೇಳಿಕೆ ನೀಡಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

4 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

5 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

7 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

8 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

10 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

15 hours ago