ಮೈದುಂಬಿ ಹರಿದ ಜಕ್ಕಲಮಡಗು ಜಲಾಶಯ: ಜಲಾಶಯಕ್ಕೆ ಶಾಸಕ ಧೀರಜ್ ಮುನಿರಾಜ್, ನಗರಸಭೆ ಅಧ್ಯಕ್ಷೆ ಹಾಗೂ ಸದಸ್ಯರ ಭೇಟಿ: ನಾಳೆ ಶಾಸಕ ಹಾಗೂ ಸಂಸದರಿಂದ ಬಾಗಿನ ಅರ್ಪಣೆ

ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಗಡಿಭಾಗದಲ್ಲಿರುವ ಜಕ್ಕಲಮಡಗು ಜಲಾಶಯ ಅವಳಿ ನಗರಗಳಿಗೆ ಕುಡಿಯುವ ನೀರು ಪೂರೈಸುವ ನೀರಿನ ಸೆಲೆಯಾಗಿದ್ದು, ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಇಂದು ಮುಂಜಾನೆ ಜಕ್ಕಲಮಡುಗು ಜಲಾಶಯ ಸಂಪೂರ್ಣ ಭರ್ತಿಯಾಗಿ ಕೋಡಿಬಿದ್ದಿದೆ, ಜಲಾಶಯದ ನೀರನ್ನೇ ನಂಬಿರುವ ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ಜನರ ಮುಖದಲ್ಲಿ ಮಂದಹಾಸ ಮೂಡಿದೆ.

ಈ ಹಿನ್ನೆಲೆ ಜಕ್ಕಲಮಡಗು ಜಲಾಶಯಕ್ಕೆ ಇಂದು ದೊಡ್ಡಬಳ್ಳಾಪುರ ಶಾಸಕ‌ ಧೀರಜ್ ಮುನಿರಾಜ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ನಗರಸಭೆ ಸದಸ್ಯರು ಭೇಟಿ ನೀಡಿ‌ ಕೋಡಿ ಬಿದ್ದಿರುವ ದೃಶ್ಯ ಕಣ್ತುಂಬಿಕೊಂಡರು.

ನಾಳೆ ಬೆಳಗ್ಗೆ 11ಕ್ಕೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಹಾಗೂ ಶಾಸಕ ಧೀರಜ್ ಮುನಿರಾಜ್ ಅವರು ಜಕ್ಕಲಮಡಗು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಜಕ್ಕಲಮಡು ಜಲಾಶಯ 4390 ದಶಲಕ್ಷ ಲೀಟರ್ ಸಂಗ್ರಹಣಾ ಸಾಮರ್ಥ್ಯ, 51.25 ಚ.ಮೀ. ಶೇಖರಣಾ ವಿಸ್ತಿರ್ಣ ಹೊಂದಿದೆ. ಈ ಜಲಾಶಯದಿಂದ ಚಿಕ್ಕಬಳ್ಳಾಪುರ ನಗರ ಶೇ.68 ಪಾಲು ಪಡೆದರೆ, ದೊಡ್ಡಬಳ್ಳಾಪುರ ನಗರಕ್ಕೆ ಶೇ.32 ಪಾಲಿದೆ.

ಈ ಬಾರಿ ಜಲಾಶಯ ತುಂಬಿ ಹರಿಯಲಿದೆ ಎಂಬ ಜನರ ಆಶಾಭಾವನೆಗೆ ತಕ್ಕಂತೆ ಉತ್ತಮ ಮಳೆಯಾಗಿ ಜಲಾಶಯ ತುಂಬಿರುವುದು ಎರಡು ನಗರಗಳ ಜನತೆಗೆ ಅತ್ಯಂತ ಸಂತಸದ ವಿಷಯವಾಗಿದೆ.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

2 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

3 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

4 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

8 hours ago