ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಗಡಿಭಾಗದಲ್ಲಿರುವ ಜಕ್ಕಲಮಡಗು ಜಲಾಶಯ ಅವಳಿ ನಗರಗಳಿಗೆ ಕುಡಿಯುವ ನೀರು ಪೂರೈಸುವ ನೀರಿನ ಸೆಲೆಯಾಗಿದ್ದು, ಕಳೆದ ವರ್ಷ ಮಳೆಯ ಕೊರತೆಯಿಂದ ಜಲಾಶಯ ಕೋಡಿ ಬಿದ್ದಿರಲಿಲ್ಲ.
ಎರಡು ವರ್ಷಗಳ ಹಿಂದೆ, ಅಂದರೆ, 2022ರ ಜೂನ್ ತಿಂಗಳಲ್ಲೇ ಕೋಡಿಬಿದ್ದು ಎರಡು ನಗರಗಳಲ್ಲಿ ಕಳೆದ ಎರಡು ವರ್ಷದಿಂದ ಯಾವುದೇ ನೀರಿನ ಸಮಸ್ಯೆಯಾಗದಂತ ಪರಿಸ್ಥಿತಿ ಇತ್ತು. ಇದೀಗ ಮತ್ತೊಮ್ಮೆ ಜಲಾಶಯ ತುಂಬಿರುವುದು ಇನ್ನೆರಡು ವರ್ಷಗಳ ನೀರಿನ ಸಮಸ್ಯೆಯನ್ನ ದೂರ ಮಾಡಿದೆ.
ಜಕ್ಕಲಮಡು ಜಲಾಶಯ 4390 ದಶಲಕ್ಷ ಲೀಟರ್ ಸಂಗ್ರಹಣಾ ಸಾಮರ್ಥ್ಯ, 51.25 ಚ.ಮೀ. ಶೇಖರಣಾ ವಿಸ್ತಿರ್ಣ ಹೊಂದಿದೆ. ಈ ಜಲಾಶಯದಿಂದ ಚಿಕ್ಕಬಳ್ಳಾಪುರ ನಗರ ಶೇ.68 ಪಾಲು ಪಡೆದರೆ, ದೊಡ್ಡಬಳ್ಳಾಪುರ ನಗರಕ್ಕೆ ಶೇ.32 ಪಾಲಿದೆ.
ಈ ಬಾರಿ ಜಲಾಶಯ ತುಂಬಿ ಹರಿಯಲಿದೆ ಎಂಬ ಜನರ ಆಶಾಭಾವನೆಗೆ ತಕ್ಕಂತೆ ಉತ್ತಮ ಮಳೆಯಾಗಿ ಜಲಾಶಯ ತುಂಬಿರುವುದು ಎರಡು ನಗರಗಳ ಜನತೆಗೆ ಅತ್ಯಂತ ಸಂತಸದ ವಿಷಯವಾಗಿದೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…