ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ ನಿರ್ಧಾರ-ಸಿಎಂ ಸಿದ್ದರಾಮಯ್ಯ

ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ. ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದರು.

ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಅವರ ಸಿನಿಮಾಗಳು ಇಷ್ಟ ಆಗುತ್ತಿದ್ದವು ಎಂದು ತಿಳಿಸಿದರು.

ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು. ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ ಎಂದು ಹೇಳಿದರು.

ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ ಎಂದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

10 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

14 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

14 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

19 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago