Categories: ಮೈಸೂರು

ಮೈಸೂರು ದಸರಾದಲ್ಲಿ ಪಾಲ್ಗೊಂಡಿದ್ದ ಅಶ್ವತ್ಥಾಮ ಅಸ್ತಂಗತ

ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ  ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದೆ.

ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಅಶ್ವತ್ಥಾಮ ಆನೆಯು ಮೇವು ಅರಸಿಕೊಂಡು ಕಾಡಿಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ 38 ವರ್ಷ ಪ್ರಾಯದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಹೇಳಲಾಗಿದ್ದರೂ, ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ಹೇಳಿವೆ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು ನಾಲ್ಕು ವರ್ಷದಲ್ಲಿಯೇ 2021ರ ದಸರಾಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.‌

2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದ ಅಶ್ವತ್ಥಾಮ ಜಂಬೂಸವಾರಿಯಲ್ಲಿ ಭಾಗವಹಿಸಿರಲಿಲ್ಲ.

ಸಿಎಂ ಸಿದ್ದರಾಮಯ್ಯ ಭಾವುಕ

ಮೈಸೂರು ದಸರಾದಲ್ಲಿ ಪಾಲ್ಗೊಂಡು ಲಕ್ಷಾಂತರ ಜನರ ಮೆಚ್ಚುಗೆ ಗಳಿಸಿದ್ದ ಆನೆ ಅಶ್ವತ್ಥಾಮನ ಸಾವು ನೋವುಂಟುಮಾಡಿದೆ. ತನ್ನ ಶಾಂತ ಸ್ವಭಾವ ಮತ್ತು ಗಾಂಭೀರ್ಯದಿಂದಾಗಿ ಬಹುಬೇಗನೇ ವಿಶ್ವವಿಖ್ಯಾತ ದಸರಾದ ಭಾಗವಾಗಿ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಎಂದು ಸಿಎಂ ಸಿದ್ದರಾಮಯ್ಯ ಭಾವುಕರಾಗಿದ್ದಾರೆ

ಅಶ್ವತ್ಥಾಮನ ನೆನಪು ನಮ್ಮ ಮನದಲ್ಲಿ ಶಾಶ್ವತವಾಗಿರಲಿದೆ‌ ಎಂದಿದ್ದಾರೆ.

Ramesh Babu

Journalist

Recent Posts

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

1 hour ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

5 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

6 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

6 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

10 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

21 hours ago