ಮೊಟ್ಟ ಮೊದಲ ಬಾರಿಗೆ ಹಾದ್ರೀಪುರ ಪ್ರೀಮಿರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ

ದೊಡ್ಡಬಳ್ಳಾಪುರ: ಇದೇ ಮೊದಲ ಬಾರಿಗೆ ತಾಲೂಕಿನ ಹಾದ್ರೀಪುರ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ‌ ಮಾಡಿ ಯಶಸ್ವಿಗೊಳಿಸಲಾಗಿದೆ. ಗ್ರಾಮದ ಯುವಕರೆಲ್ಲಾ ಸೇರಿ ಕ್ರಿಕೆಟ್ ಟೂರ್ನಮೆಂಟ್ ಏರ್ಪಡಿಸಲಾಗಿತ್ತು. ಎರಡು ದಿನದ ಕಾಲ ಟೂರ್ನಮೆಂಟ್ ನಡೆದಿದ್ದು, ಆಟದಲ್ಲಿ ಒಟ್ಟು 50 ಜನ ಆಟಗಾರರು ಭಾಗವಹಿಸಿದ್ದರು. ಭಜರಂಗಿ, ಜೈಭೀಮ್, ರಾಯಲ್ ಸ್ಟ್ರಾಂಗ್, ಎಬಿಡಿ, ಚೇಸಿಂಗ್ ಕಿಂಗ್ಸ್ ಹೀಗೆ ಒಟ್ಟು 5 ತಂಡಗಳು ಭಾಗವಹಿಸಿದ್ದವು.

ಯುವಕರಿಗೆ ಪ್ರೋತ್ಸಾಹ

ಗ್ರಾಮದ ಪ್ರತಿಯೊಬ್ಬ ಯುವಕರನ್ನು ಒಗ್ಗೂಡಿಸಿಕೊಂಡು ಆಟ ಆಡಲಾಯಿತು. ಐಪಿಎಲ್ ಮಾದರಿಯಲ್ಲಿ ಆಟಗಾರರನ್ನು ಸೆಲೆಕ್ಟ್ ಮಾಡಲಾಯಿತು. ಸಣ್ಣ ಸಣ್ಣ ಮಕ್ಕಳನ್ನು ಸೇರಿಸಿಕೊಂಡು, ಯುವಕರಿಗೆ ಚಿಕ್ಕವಯಸ್ಸಿನಲ್ಲಿಯೇ ಕ್ರೀಡೆಯ ಬಗ್ಗೆ ಉತ್ಸಾಹ ಬರುವಂತೆ ಪ್ರೋತ್ಸಾಹ ನೀಡಲಾಯಿತು. ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಕ್ರೀಡೆಗೆ ಪ್ರೋತ್ಸಾಹ ಕಡಿಮೆ ಆಗುತ್ತಿರುವ ಹಿನ್ನೆಲೆ ಈ ರೀತಿಯ ಕ್ರೀಡೆಗಳ ಆಯೋಜನೆ ಯುವಕರನ್ನು ಕ್ರೀಡೆಗಳತ್ತ ಸೆಳೆಯಲಾಗುತ್ತಿದೆ.

ಒಟ್ಟು ಐದು ತಂಡಗಳ ನೇರ ಹಣಾಹಣಿಯ ನಡುವೆ ರಾಯಲ್ ಸ್ಟ್ರಾಂಗ್ ಬಾಯ್ಸ್ ವಿಜೇತರಾದರು, ಎಬಿಡಿ ಸ್ಟ್ರೈಕರ್ಸ್ ತಂಡ ದ್ವಿತೀಯ ಸ್ಥಾನ ಪಡೆದು ಟೂರ್ನಿಗೆ ತೆರೆ ಎಳೆದರು.

ಈ ವೇಳೆ ಹರ್ಷ ಎಂ, ಕಾಂತರಾಜ್, ಮಂಜಣ್ಣ, ಶ್ರೀಧರ್ ಹೆಚ್ ಆರ್, ಬೈಲಪ್ಪ ಎಚ್ ಎಂ, ಚನ್ನಮುನಿಯಪ್ಪ ಸಿ, ಶ್ರೀಧರ್ ಎಂ, ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

3 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

4 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

15 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

19 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

21 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

21 hours ago