ಮಹಿಳೆಯ ಭೀಕರ ಹತ್ತೆಯಾಗಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ದೇವರುಮಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸೊಣ್ಣೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾಗಿರುವ ಮೃತ ದೇಹ ಮನೆಯ ಬಾಗಿಲಿನಲ್ಲಿ ರಕ್ತದ ಮಡಿಲಿನಲ್ಲಿ ಪತ್ತೆಯಾಗಿದೆ.
ಪದ್ಮಮ್ಮ ಕೊಲೆಯಾಗಿರುವ ಮಹಿಳೆ. ಗಂಡನೇ ಕೊಲೆ ಮಾಡಿರುವ ಶಂಕೆವ್ಯಕ್ತವಾಗಿದೆ. ಜಮೀನಿನ ವಿಚಾರವಾಗಿ ಆಗಾಗ ಗಂಡ ಹೆಂಡತಿ ನಡುವೆ ಜಗಳ ಆಗುತ್ತಿತ್ತು ಎನ್ನಲಾಗಿದೆ.
ಪದ್ಮಮ್ಮ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಇಂದು ಬೆಳಗಿನ ಜಾವ 6ಗಂಟೆ ಸಮಯದಲ್ಲಿ ಮನೆಯ ಬಾಗಿಲ ಮುಂದೆ ಭೀಕರ ಹತ್ಯೆಯಾಗಿ ಬಿದ್ದಿರುವ ದೃಶ್ಯ ಕಂಡುಬಂದಿದೆ.
ಮಚ್ಚು-ಲಾಂಗು ಸೇರಿದಂತೆ ಮಾರಕಸ್ತ್ರಗಳಿಂದ ತಲೆ, ಕೈ ಕತ್ತರಿಸಿ ವಿಕೃತಿ ಮೆರೆಯಲಾಗಿದೆ.
ಸದ್ಯ ಮೃತಳ ಗಂಡನ ಎರಡನೇ ಹೆಂಡತಿ ಮಂಜುಳ ಹಾಗೂ ಮಗ ಪರಾರಿಯಾಗಿದ್ದು, ಗಂಡ ಮುನಿರೆಡ್ಡಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…