ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ.98 ರಷ್ಟು ಅರ್ಜಿಗಳನ್ನು ವಿಲೇವಾರಿ

ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು, ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದರು.

ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ತಿಳಿಸಿದರು.

ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದರು. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ, ಅಸಮಾನತೆ ನಿವಾರಿಸುವ ಕಾರ್ಯಕ್ರಮ ಎಂದರು.

ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು, ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ-ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದು ಹೇಳಿದರು.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

57 minutes ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

1 hour ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

2 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

5 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

7 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

10 hours ago