ನವೆಂಬರ್ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು, ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದರು.
ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.
ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದರು. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ, ಅಸಮಾನತೆ ನಿವಾರಿಸುವ ಕಾರ್ಯಕ್ರಮ ಎಂದರು.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…