ಮೊಬೈಲ್ ಅಂಗಡಿಗಳಿಗೆ ಕನ್ನ: ಬೆಲೆ ಬಾಳುವ ಮೊಬೈಲ್ ಗಳನ್ನ ದೋಚಿದ ಕಳ್ಳರು

ಬುಧವಾರ ತಡರಾತ್ರಿ ಸ್ಕೌಟ್ ಕ್ಯಾಂಪ್‌ ರಸ್ತೆಯಲ್ಲಿರುವ ಕಿರಣ್ ಕುಮಾರ್ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿಯ ರೋಲಿಂಗ್ ಶೆಟರ್ ಮೀಟಿ ಬೆಲೆ ಬಾಳುವ ಮೊಬೈಲ್ ಗಳನ್ನ ದೋಚಿ ಪರಾರಿಯಾಗಿರುವ ಕಳ್ಳರು.

ಕಳೆದ ಶನಿವಾರ ತಡರಾತ್ರಿ ಇದೇ ಅಂಗಡಿಯ ಪಕ್ಕದಲ್ಲಿರುವ ಕಿಶೋರ್ ಎಂಬುವವರಿಗೆ ಸೇರಿದ ಮತ್ತೊಂದು ಮೊಬೈಲ್ ಸರ್ವೀಸ್ ಅಂಗಡಿಯಲ್ಲಿ ಕಳ್ಳತನ ಮಾಡಲು ರೋಲಿಂಗ್ ಶೆಟರ್ ಮೀಟಿದ್ದರು, ಆದರೆ ಬಾಗಿಲು ಹೊಡೆಯಲು ಸಾದ್ಯವಾಗದೆ ಬರಿಗೈಯಲ್ಲಿ ಹಿಂದಿರುಗಿದ್ದರು. ಈ ಕುರಿತ ಕಿಶೋರ್ ಅವರು ಪೊಲೀಸ್ ದೂರು ನೀಡಿರಲಿಲ್ಲ ಎಂದು ತಿಳಿಸಿದ್ದಾರೆ.

ಶನಿವಾರ ಬರಿಗೈಯಲ್ಲಿ ಹೋಗಿದ್ದ ಕಳ್ಳರು ಈಗ ಅದೇ ರಸ್ತೆಯಲ್ಲಿನ ಕಿರಣ್ ಕುಮಾರ್ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿಯ ರೋಲಿಂಗ್ ಶೆಟರ್ ಮೀಟಿದ ಕಿಡಿಗೇಡಿಗಳು ಕಳ್ಳತನ ಮಾಡಿದ್ದಾರೆ.

ಈ ವೇಳೆ ಅಂಗಡಿಯಲ್ಲಿದ್ದ ಹದಿಮೂರು ಸಾವಿರ ನಗದು ಹಾಗೂ 35 ಸಾವಿರ ಬೆಲೆ ಬಾಳುವ ಮೊಬೈಲ್‌ಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಒದಗಿಬಂದಿದೆ.

ಕಿರಣ್ ಅವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

24 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago