
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ನಡೆದಿದೆ.

ನವೀನ್ ಎಂಬ ಯುವಕ ಚಾಕುವನ್ನ ಮರೆಮಾಚಿಕೊಂಡು ಬಂದು 21 ವರ್ಷದ ಶಹಬಾಜ್ ಎಂಬ ಯುವಕನಿಗೆ ಚಾಕು ಇರಿದಿದ್ದಾನೆ.

ಗಾಯಾಳುವನ್ನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಯುವಕನ ಮೇಲೆ ನಡೆದಿರುವ ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಜಯಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಾಕು ಇರಿತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….