ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮೊಬೈಲ್ ಫೋನ್‌ಗಳ ದುರಸ್ತಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಜನವರಿ 23 ರಿಂದ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು 2023ರ ಜನವರಿ 23 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.
ಆಸಕ್ತರು ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಭೇಟಿ ನೀಡಬಹುದು ಅಥವಾ ಕಚೇರಿ ದೂರವಾಣಿ ಸಂಖ್ಯೆ: 080-27728166 (ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆ), ಮೊಬೈಲ್ ಸಂಖ್ಯೆ: 9113880324, 9740982585, 8884554510, 8050549412, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಆನಂದ್.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…