ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮೊಬೈಲ್ ಫೋನ್‌ಗಳ ದುರಸ್ತಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಅರ್ಜಿ ಸಲ್ಲಿಸಲು 2023ರ ಜನವರಿ 03 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಗೆ ಖುದ್ದಾಗಿ ಭೇಟಿ ನೀಡಬಹುದು.
ಕಚೇರಿ ದೂರವಾಣಿ ಸಂಖ್ಯೆ: 080-27728166 (ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆ), ಮೊಬೈಲ್ ಸಂಖ್ಯೆ: 9113880324, 9740982585, 8884554510, 8050549412, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಆನಂದ್.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…