ಮೊಬೈಲ್‌ ಫೋನ್‌ ದುರಸ್ತಿ ಮತ್ತು ಸೇವೆ ಕುರಿತ ಉಚಿತ ತರಬೇತಿಗೆ ಜೂ. 19 ರಂದು ನೇರ ಸಂದರ್ಶನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಮೊಬೈಲ್‌ ಫೋನ್‌ ದುರಸ್ತಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಜೂನ್‌ 19 ರಿಂದ ಆರಂಭವಾಗಲಿದ್ದು, ಜೂನ್‌ 19 ರಂದು ಬೆಳಿಗ್ಗೆ 9.30 ರಿಂದ ನೇರ ಸಂದರ್ಶನ ನಡೆಯಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ನೇರ ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9113880324, 9740982585, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಜೆ.ಆನಂದ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

1 hour ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

12 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

13 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

16 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

21 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

24 hours ago