ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಮೊಬೈಲ್ ಫೋನ್ ದುರಸ್ತಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜೂನ್ 15 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9113880324, 9740982585, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಜೆ.ಆನಂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡ ಹಿರಿಯ ಐಪಿಎಸ್ ಅಧಿಕಾರಿ ಆರ್. ಹಿತೇಂದ್ರ ಅವರು ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಅಧಿಕಾರ…
ರಾಜ್ಯದ ರೈತರಿಗೆ 5 ಸಾವಿರ ರೂ. ಬರ ಪರಿಹಾರ ನೀಡಿದ್ದು, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದ ತಕ್ಷಣ ಹೆಚ್ಚುವರಿ ಪರಿಹಾರವನ್ನು…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ನೇಗಿಲ ಯೋಗಿ ಯೋಜನೆಗೆ ಚಾಮರಾಜನಗರ, ಗುಂಡ್ಲುಪೇಟೆ ಆಯ್ಕೆಯಾಗಿದ್ದು, ಮುಂಗಾರಿಗೂ ಮೊದಲೇ ರೈತರಿಗೆ ಯೋಜನೆ ಕುರಿತು ವ್ಯಾಪಕ…
ಬೆಳಗಾವಿ: ಸರ್ಕಾರಿ ಕೆಲಸ ಮಾಡಿಕೊಡುವ ನೆಪದಲ್ಲಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಉಪವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಎಸ್ಡಿಎ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ…
ದೊಡ್ಡಬಳ್ಳಾಪುರ: ಎಸ್ಡಿಎ, ಎಫ್ಡಿಎ ಹಾಗೂ ಅಬಕಾರಿ ಗಾರ್ಡ್ ನೇಮಕಾತಿ ಪರೀಕ್ಷೆಗಳಲ್ಲಿ ಈ ಹಿಂದೆ ಇದ್ದ 100 ಅಂಕಗಳ ಸಾಮಾನ್ಯ…
ದೊಡ್ಡಬಳ್ಳಾಪುರ: ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಅತ್ಯಂತ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನ, ಮೂಲಭೂತ ಹಕ್ಕುಗಳು, ಕರ್ತವ್ಯಗಳು…