ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 20 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 18 ಆಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ 9740982585, 8884554510, 9113880324, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…