ಮೊಬೈಲ್‌ ರಿಪೇರಿ & ಸೇವೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಸೆಪ್ಟೆಂಬರ್‌ 11 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್‌ 31 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

2 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

4 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

10 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

11 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

13 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

22 hours ago