ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 17 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…