ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 13 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 8884554510, 9113880324, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…