ಕೋಲಾರ: ಮಕ್ಕಳು ಮೈದಾನದಲ್ಲಿ ಆಟವಾಡಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಂಡ ಉದಾಹರಣೆಗಳಿವೆ. ಇಂದು ಮಕ್ಕಳು ಮೊಬೈಲ್ ವ್ಯಾಮೋಹವನ್ನು ಬಿಟ್ಟು ಕ್ರೀಡೆಗೆ ಹೆಚ್ಚು ಗಮನ ಕೊಡಬೇಕಾಗಿದೆ ಎಂದು ಹಿರಿಯ ವಕೀಲ ಕೆ.ವಿ ಶಂಕರಪ್ಪ ತಿಳಿಸಿದರು.
ನಗರದ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶನಿವಾರ ಕೋಲಾರ ಖೋ-ಖೋ ಸಂಸ್ಥೆಯ ವತಿಯಿಂದ ಒಂದು ತಿಂಗಳ ಉಚಿತ ಬೇಸಿಗೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಮೊಬೈಲ್‍ನಲ್ಲಿ ಆಟ ಆಡುವುದನ್ನು ನಿಲ್ಲಿಸಿ ಮೈದಾನದಲ್ಲಿ ಆಟವಾಡಲು ಪ್ರೋತ್ಸಾಹಿಸಬೇಕು. ಅಂದಾಗ ಮಕ್ಕಳ ಆರೋಗ್ಯ ವೃದ್ಧಿಯಾಗಲು ಸಾಧ್ಯ. ಕ್ರೀಡೆಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ ಎಂದರು.
ಮನುಷ್ಯನ ಸೋಮಾರಿತನ ಬಿಟ್ಟಾಗ ಮಾತ್ರವೇ ಯಶಸ್ಸು ಕಾಣಲು ಸಾಧ್ಯ ಇವತ್ತು ದಾನಿಗಳ ಸಹಾಯ ಪೋತ್ಸಾಹದಿಂದ ಶಿಬಿರ ನಡೆಯುತ್ತಿದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವಂತಾಗಬೇಕು ಮಕ್ಕಳಿಗೆ ಆಹಾರ ಪದ್ದತಿಗಳನ್ನು ಅನುಸರಿಸಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಮಾತನಾಡಿ ಕ್ರೀಡೆಯಲ್ಲಿ ಯಶಸ್ಸು ಗಳಿಸಿದಾಗ ಸರ್ಕಾರಿ ಹುದ್ದೆಗಳು ಲಭ್ಯವಿದೆ ಸದೃಢ ದೇಹದಲ್ಲಿ ಸದೃಢ ಮನಸ್ಸಿನಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಎಲ್ಲರೂ ಗೌರವಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸುರೇಶ್ ಸೂರಿ, ರಘು(ಚಿಟ್ಟಿ), ರೈತ ಸಂಘದ ಅಬ್ಬಣಿ ಶಿವಪ್ಪ, ಶ್ರೀಧರ್, ಜಗನ್ನಾಥ್, ಮುಂತಾದವರು ಇದ್ದರು.
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…