Categories: ಕೋಲಾರ

ಮೊಬೈಲ್ ವ್ಯಾಮೋಹ ಬಿಡಿ, ಕ್ರೀಡೆಯಲ್ಲಿ ಭಾಗವಹಿಸಿ- ಕೆ.ವಿ ಶಂಕರಪ್ಪ

ಕೋಲಾರ: ಮಕ್ಕಳು ಮೈದಾನದಲ್ಲಿ ಆಟವಾಡಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಂಡ ಉದಾಹರಣೆಗಳಿವೆ. ಇಂದು ಮಕ್ಕಳು ಮೊಬೈಲ್‍ ವ್ಯಾಮೋಹವನ್ನು ಬಿಟ್ಟು ಕ್ರೀಡೆಗೆ ಹೆಚ್ಚು ಗಮನ ಕೊಡಬೇಕಾಗಿದೆ ಎಂದು ಹಿರಿಯ ವಕೀಲ ಕೆ.ವಿ ಶಂಕರಪ್ಪ ತಿಳಿಸಿದರು.

ನಗರದ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶನಿವಾರ ಕೋಲಾರ ಖೋ-ಖೋ ಸಂಸ್ಥೆಯ ವತಿಯಿಂದ ಒಂದು ತಿಂಗಳ ಉಚಿತ ಬೇಸಿಗೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಮೊಬೈಲ್‍ನಲ್ಲಿ ಆಟ ಆಡುವುದನ್ನು ನಿಲ್ಲಿಸಿ ಮೈದಾನದಲ್ಲಿ ಆಟವಾಡಲು ಪ್ರೋತ್ಸಾಹಿಸಬೇಕು. ಅಂದಾಗ ಮಕ್ಕಳ ಆರೋಗ್ಯ ವೃದ್ಧಿಯಾಗಲು ಸಾಧ್ಯ. ಕ್ರೀಡೆಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ ಎಂದರು.

ಮನುಷ್ಯನ ಸೋಮಾರಿತನ ಬಿಟ್ಟಾಗ ಮಾತ್ರವೇ ಯಶಸ್ಸು ಕಾಣಲು ಸಾಧ್ಯ ಇವತ್ತು ದಾನಿಗಳ ಸಹಾಯ ಪೋತ್ಸಾಹದಿಂದ ಶಿಬಿರ ನಡೆಯುತ್ತಿದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವಂತಾಗಬೇಕು ಮಕ್ಕಳಿಗೆ ಆಹಾರ ಪದ್ದತಿಗಳನ್ನು ಅನುಸರಿಸಲು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಮಾತನಾಡಿ ಕ್ರೀಡೆಯಲ್ಲಿ ಯಶಸ್ಸು ಗಳಿಸಿದಾಗ ಸರ್ಕಾರಿ ಹುದ್ದೆಗಳು ಲಭ್ಯವಿದೆ ಸದೃಢ ದೇಹದಲ್ಲಿ ಸದೃಢ ಮನಸ್ಸಿನಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಎಲ್ಲರೂ ಗೌರವಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸುರೇಶ್ ಸೂರಿ, ರಘು(ಚಿಟ್ಟಿ), ರೈತ ಸಂಘದ ಅಬ್ಬಣಿ ಶಿವಪ್ಪ, ಶ್ರೀಧರ್, ಜಗನ್ನಾಥ್, ಮುಂತಾದವರು ಇದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

9 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

14 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

18 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago