ಮೊಹರಂ ಅಂಗವಾಗಿ ಕಿಲ್ಲಾ ಮಸೀದಿಯಲ್ಲಿ ಶಿಯಾ ಮುಸ್ಲಿಮರ ಹಸೇನ್–ಹುಸೇನ್ ಆಚರಣೆ

ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಶಿಯಾ ಮುಸ್ಲಿಂ ಸಮುದಾಯದವರ ಹಸೇನ್–ಹುಸೇನ್ ಆಚರಣೆ ಶುಕ್ರವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ಸಾವಿರಾರು ಭಕ್ತರು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿ ಇಮಾಮ್ ಹುಸೇನ್ ಅವರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು.

ಧರ್ಮಗುರುಗಳ ನೇತೃತ್ವದಲ್ಲಿ ನಡೆದ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಬ್ಲೇಡ್, ಕತ್ತಿ ಸೇರಿದಂತೆ ಹರಿತ ಆಯುಧಗಳಿಂದ ತಮ್ಮ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಾರ್ಪಣೆ ಮಾಡಿ ತಮ್ಮ ಭಕ್ತಿ ಹಾಗೂ ಹರಕೆಯನ್ನು ಸಮರ್ಪಿಸಿದರು.

ಮೊಹರಂ ನಂತರದ ಏಳನೇ ದಿನ ನಡೆಯುವ ಈ ವಿಶಿಷ್ಟ ಆಚರಣೆಗೆ ದೇಶದ ವಿವಿಧ ರಾಜ್ಯಗಳಿಂದ ಹಾಗೂ ವಿದೇಶಗಳಿಂದ ಆಗಮಿಸಿದ್ದ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಶಿಯಾ ಮುಸ್ಲಿಂ ಭಕ್ತರು ಪಾಲ್ಗೊಂಡಿದ್ದರು.

ನಗರದ ಕಿಲ್ಲಾ ಮಸೀದಿಯಲ್ಲಿ ಅಂಜುಮನ್-ಎ-ಹೈದರಿಯ ಸಂಘಟನೆಯ ನೇತೃತ್ವದಲ್ಲಿ ಹಾಗೂ ಹುಸೇನ್ ಕಮಿಟಿಯ ಸಹಯೋಗದಲ್ಲಿ ಈ ಧಾರ್ಮಿಕ ಆಚರಣೆ ಪ್ರತಿವರ್ಷ ನಡೆಯುತ್ತಿದ್ದು, ದಕ್ಷಿಣ ಭಾರತದಲ್ಲಿಯೇ ದೊಡ್ಡಬಳ್ಳಾಪುರ ಈ ಆಚರಣೆಗೆ ಪ್ರಮುಖ ಕೇಂದ್ರವಾಗಿ ಗುರುತಿಸಿಕೊಂಡಿದೆ.

ಕರ್ನಾಟಕದಲ್ಲಿಯೂ ಈ ಸಂಪ್ರದಾಯ ಅತ್ಯಂತ ವೈಭವದಿಂದ ನಡೆಯುವ ಪ್ರಮುಖ ಸ್ಥಳವೆಂದು ಪರಿಗಣಿಸಲಾಗಿದೆ.

ಆಚರಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಿತ್ತು. ಕಾರ್ಯಕ್ರಮವು ಶಾಂತಿಯುತವಾಗಿ ಹಾಗೂ ಭಕ್ತಿಭಾವದಿಂದ ನೆರವೇರಿತು.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

2 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

14 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

20 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

21 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago