ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ & ಪಂಪ್‌ಸೆಟ್ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 2023ರ ಆಗಸ್ಟ್ 28 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಆಗಸ್ಟ್ 28 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 8884554510, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…